 : ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು:ಸಮಾಜ ಕಲ್ಯಾಣ ಇಲಾಖೆ (  ) ವತಿಯಿಂದ 2024-25 ನೇ ಸಾಲಿನ ಎಸ್‍.ಎಸ್‍.ಎಲ್‍.ಸಿ ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸ್‌ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ( ) ಆನ್‌ಲೈನ್‍ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್‍ ://... ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಈ ಸುದ್ದಿಯನ್ನೂ ಓದಿ | : ಗಮನಿಸಿ, ವಿವಿಧ ಯೋಜನೆಯಡಿ ಸಹಾಯಧನ, ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲೂಕು ಯಲಹಂಕ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ-560064 ಅಥವಾ ದೂರವಾಣಿ ಸಂಖ್ಯೆ: 080-28461351 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ತಾಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.