 : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು; ಇಂದು ಚಿಕ್ಕಬಳ್ಳಾಪುರ, ತುಮಕೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!
ಬೆಂಗಳೂರು:ರಾಜ್ಯದಲ್ಲಿ ಕಳೆದೆರಡು ವಾರಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ಆರ್ಭಟಿಸಲು ಆರಂಭಿಸಿದ್ದಾನೆ. ಶನಿವಾರ ಕೂಡ ವಿವಿಧೆಡೆ ಉತ್ತಮ ಮಳೆಯಾಗಿದ್ದು, ಇನ್ನು ಸೆ.23ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಕಲಬುರಗಿ, ಗದಗ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ( ) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ( ) ಮುನ್ಸೂಚನೆ ನೀಡಿದೆ.
ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಲವೆಡೆ ಸೋಮವಾರ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಸೆ.24ರಂದು ಕೂಡ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಅದೇ ರೀತಿ ಸೆ. 25ರಂದು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳ ಮೇಲೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಸೆ.28ರವರೆಗೆ ಮುಂದುವರಿಯಲಿದೆ.
ಈ ಸುದ್ದಿಯನ್ನೂ ಓದಿ | : ಬೆಳಗಿನ ಉಪಾಹಾರಕ್ಕೆ ಈ 4 ಆಹಾರ ಪದಾರ್ಥಗಳನ್ನು ಎಂದಿಗೂ ಸೇವಿಸಬೇಡಿ!
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°  ಮತ್ತು 20°  ಆಗಿರಬಹುದು. ಇನ್ನು ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°  ಮತ್ತು 20°  ಆಗಿರಬಹುದು.
