 2024: ಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
ಬೆಂಗಳೂರು:ಎಂಜಿನಿಯರಿಂಗ್, ಆರ್ಕಿಟೆಕ್ಚರ್‌, ನರ್ಸಿಂಗ್‌ ಸೇರಿ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ 2024ರ ( 2024) ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ( 2nd   ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬಿಡುಗಡೆ ಮಾಡಿದೆ.  ಸಿಇಟಿ ಪ್ರವೇಶಕ್ಕೆ ಚಾಯ್ಸ್‌ 1 ಮತ್ತು 2 ದಾಖಲಿಸಿರುವವರು ಸೆ.23ರಿಂದ 26ರವರೆಗೆ ಶುಲ್ಕ ಪಾವತಿಸಬೇಕು. ಚಾಯ್ಸ್ 1 ಆಯ್ಕೆ ಮಾಡಿದವರು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಸೆ.26ರೊಳಗೆ ಕಾಲೇಜಿಗೆ ದಾಖಲಾಗಬೇಕು ಎಂದು ಕೆಇಎ ತಿಳಿಸಿದೆ.
ಈ ಬಗ್ಗೆ ಕೆಇಎ ಪ್ರಕಟಣೆ ಹೊರಡಿಸಿದ್ದು, ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಚಾಯ್ಸ್ ಅನ್ನು ಆಯ್ಕೆ ಮಾಡಲು ಸೆ.23ರ ಬೆಳಗ್ಗೆ 11ರಿಂದ ಸೆ. 25ರ ರಾತ್ರಿ 11.59ವರೆಗೆ (ನಾಲ್ಕು ಚಾಯ್ಸ್‌ಗಳಲ್ಲಿ ಸೂಕ್ತವಾದ ಚಾಯ್ಸ್ ಅನ್ನು ಆಯ್ಕೆ ಮಾಡಿ- ಯಾವುದೇ ಚಾಯ್ಸ್ ಅನ್ನು ಆಯ್ಕೆ ಮಾಡುವ ಮುನ್ನ ಪ್ರತಿ ಚಾಯ್ಸ್‌ನ ಪರಿಣಾಮವನ್ನು ಗಮನಿಸಿ) ಅವಕಾಶ ನೀಡಲಾಗಿದೆ.
##UGNEET2nd        #.  ಪ್ರವೇಶಕ್ಕೆ  1 & 2 ದಾಖಲಿಸಿದವರು ಸೆ.23ರಿಂದ 26ರವರೆಗೆ ಶುಲ್ಕ ಪಾವತಿಸಬೇಕು.  1 ಆಯ್ಕೆ ಮಾಡಿದವರು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಸೆ.26ರೊಳಗೆ ಕಾಲೇಜಿಗೆ ವರದಿಯಾಗಬೇಕು.@@../
ಇನ್ನು ಚಾಯ್ಸ್-1 ಅಥವಾ ಚಾಯ್ಸ್-2 ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ‌ ಶುಲ್ಕ ಪಾವತಿ ಮಾಡಲು ಸೆ. 23ರಿಂದ 26ರವರೆಗೆ ಅವಕಾಶ ನೀಡಲಾಗಿದೆ.  ಚಾಯ್ಸ್-1 ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಸೆ.23ರಿಂದ 26ರವರೆಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅದೇ ರೀತಿ ಚಾಯ್ಸ್-1 ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಸೆ.26 ಸಂಜೆ 5.30ರೊಳಗೆ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು ಎಂದು ಕೆಇಎ ಮಾಹಿತಿ ನೀಡಿದೆ.
ಬೆಂಗಳೂರು:ಗ್ರಾಮ ಆಡಳಿತಾಧಿಕಾರಿ ಹುದ್ದೆಗಳು, ಜಿಟಿಟಿಸಿ ಹುದ್ದೆಗಳ ನೇಮಕಾತಿಗೆ ಸೆ. 29ರಂದು ನಡೆಯುವ ಕಡ್ಡಾಯ ಕನ್ನಡ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ( ) ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳುಕೆಇಎ ವೆಬ್‌ಸೈಟ್‌ನಲ್ಲಿಹಾಲ್‌ ಟಿಕೆಟ್‌ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.
ರಾಜ್ಯ ಸರ್ಕಾರವು ಗ್ರೂಪ್‌ ಬಿ ಮತ್ತು ಗ್ರೂಪ್ ಸಿ‌ ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಿರುವ ಹಿನ್ನೆಲೆಯಲ್ಲಿ ಗ್ರಾಮ ಆಡಳಿತಾಧಿಕಾರಿ ಹುದ್ದೆ (  ) ಹಾಗೂ  ಬಿಡಿಎ ಮತ್ತು ಇತರೆ ಹುದ್ದೆಗಳ ನೇಮಕಾತಿಗೆ ಮತ್ತೆ ಅರ್ಜಿ ಆಹ್ವಾನಿಸಲಾಗಿದೆ. ಸೆ.19ರಿಂದ ಸೆ.28ವರೆಗೆ (9 ದಿನ) ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಇದೀಗ ಸೆ. 29ಕ್ಕೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ.
ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿ ಹುದ್ದೆಗಳಿಗೆ ಸೆ.29ಕ್ಕೆ ಕಡ್ಡಾಯ ಕನ್ನಡ ಪರೀಕ್ಷೆ ಇದ್ದು, ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು ವೆಬ್ ಸೈಟ್ ನಲ್ಲಿ ಲಿಂಕ್ ಬಿಡಲಾಗಿದೆ. ಕೆಲವರು ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದು, ಅಂತಹವರಿಗೆ ಎರಡೆರಡು ಪ್ರವೇಶ ಪತ್ರಗಳು ಬಂದಿವೆ. ಅಂತಹವರು ತಮಗೆ ಇಚ್ಛೆ ಇರುವ ಒಂದು ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು.
ಪರೀಕ್ಷೆ ನಂತರ ಎರಡೂ ಪ್ರವೇಶ ಪತ್ರಗಳ ಜೆರಾಕ್ಸ್ ಪ್ರತಿಯನ್ನು ಕೆಇಎಗೆ ಅಂಚೆ ಅಥವಾ ಖುದ್ದಾಗಿ ತಲುಪಿಸಬೇಕು. ಪ್ರತ್ಯೇಕ ನೇಮಕಾತಿ ಅಧಿಸೂಚನೆಗಳಾದ ಕಾರಣಕ್ಕೆ ಈ ರೀತಿ ಎರಡೆರಡು ಪ್ರವೇಶ ಪತ್ರ ಜನರೇಟ್ ಆಗಿದ್ದು, ಆತಂಕಪಡುವ ಅಗತ್ಯ ಇಲ್ಲಎಂದು ತಿಳಿಸಿದ್ದಾರೆ.
ಗ್ರಾಮ ಆಡಳಿತಾಧಿಕಾರಿ ಹುದ್ದೆಗಳು, ಜಿಟಿಟಿಸಿ ಹುದ್ದೆಗಳ ಪರೀಕ್ಷೆಪ್ರವೇಶ ಪತ್ರಕ್ಕೆಇಲ್ಲಿಕ್ಲಿಕ್‌ಮಾಡಿ
##GTTCಹುದ್ದೆಗಳಿಗೆ ಸೆ.29ಕ್ಕೆ ಕಡ್ಡಾಯ ಕನ್ನಡ ಪರೀಕ್ಷೆ ಇದ್ದು ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು#KEAವೆಬ್ ಸೈಟ್ ನಲ್ಲಿ ಲಿಂಕ್ ಬಿಡಲಾಗಿದೆ. ಕೆಲವರು ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದು ಅಂತಹವರಿಗೆ ಎರಡೆರಡು ಪ್ರವೇಶ ಪತ್ರಗಳು ಬಂದಿವೆ. ಅಂತಹವರು ತಮಗೆ ಇಚ್ಛೆ ಇರುವ ಒಂದು ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು.
ಈ ಸುದ್ದಿಯನ್ನೂ ಓದಿ |  : ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ
ಈಗಾಗಲೇ ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಮತ್ತು ಜಿಟಿಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಕಡ್ಡಾಯ ಕನ್ನಡ ಪರೀಕ್ಷೆಸೆ. 29ಮತ್ತು ವಯೋಮಿತಿ ಸಡಿಲಿಕೆಯಿಂದ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆಅ.26ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಅಕ್ಟೋಬರ್‌ 27ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈಗಾಗಲೇ ಮಾಹಿತಿ ನೀಡಿದೆ.
#PSIಸೇರಿದಂತೆ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು#KEAಪ್ರಕಟಿಸಿದೆ. ಪರೀಕ್ಷೆ  3ಕ್ಕೆ ನಡೆಯಲಿದೆ.ವಯೋಮಿತಿ ಸಡಿಲ ಮಾಡಿರುವ ಕಾರಣ#VAOಮತ್ತು#GTTCಹುದ್ದೆಗಳಿಗೆ ಸೆ.19ರಿಂದ 9 ದಿನ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ.@@../92wmxAwTht
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕೆಇಎ ಭರ್ತಿ ಮಾಡಲಿದೆ. ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆ ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ಇರುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರಲಿದ್ದು, ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದೆ. ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಬಾರಿಯಿಂದ ಆಯ್ಕೆ ವಿಧಾನವನ್ನು ಬದಲಿಸಲಾಗಿದೆ.