 : ಇಂದು ಗದಗ, ಕಲಬುರಗಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ!
ಬೆಂಗಳೂರು:ಸೆ.22ರಂದು ಭಾನುವಾರ ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕ ಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸೇರಿ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( ) ಮುನ್ಸೂಚನೆ ನೀಡಿದೆ.
ಇನ್ನು ಸೆ.23 ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
ಅದೇ ರೀತಿ ಸೆ. 24ರಂದು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
ಈ ಸುದ್ದಿಯನ್ನೂ ಓದಿ | : ಆರೋಗ್ಯಕರ ಭವಿಷ್ಯಕ್ಕಾಗಿ ಈಗಲೇ ಸಿದ್ಧರಾಗಿ…
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 °  ಮತ್ತು 20 °  ಆಗಿರಬಹುದು.