 : ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು:ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಎಸ್‍.ಎಸ್‍.ಎಲ್‍.ಸಿ ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸ್‌ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ( ) ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ವೆಬ್‍ ಸೈಟ್://...inನಲ್ಲಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್‍-1), ಸಮಾಜ ಕಲ್ಯಾಣ ಇಲಾಖೆ, ಪ್ರಥಮ ದರ್ಜೆ ಕಾಲೇಜು ಪಕ್ಕ, ಬೆಂಗಳೂರು ಉತ್ತರ ತಾಲೂಕು / ಯಲಹಂಕ ಅಥವಾ ದೂರವಾಣಿ ಸಂಖ್ಯೆ : 080-28461351 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | : ಗ್ರಾಮ ಆಡಳಿತಾಧಿಕಾರಿ, ಜಿಟಿಟಿಸಿ ಹುದ್ದೆಗಳ ನೇಮಕಾತಿ; ಕಡ್ಡಾಯ ಕನ್ನಡ ಪರೀಕ್ಷೆ ಪ್ರವೇಶ ಪತ್ರ ಪ್ರಕಟ
ಬೆಂಗಳೂರು:ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡಲು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ( ) ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ತರಬೇತಿ ಅವಧಿ 2 ವರ್ಷಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ ಹಿರಿಯ ವಕೀಲರವರಲ್ಲಿ ತರಬೇತಿಗೆ ನೀಯೋಜಿಸಲಾಗುವುದು. ಬೆಂಗಳೂರು ನಗರ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಬಹುದು.ಆಸಕ್ತ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ವೆಬ್ ಸೈಟ್://.../.aspxನಲ್ಲಿ ಅರ್ಜಿಗಳನ್ನು ಸೆಪ್ಟೆಂಬರ್ 30ರೊಳಗೆ ಸಲ್ಲಿಸಬಹುದು.
ಆನ್ ಲೈನ್‌ ಮೂಲಕ ಸಲ್ಲಿಸಿದ ಅರ್ಜಿಗಳ ಜೊತೆಗೆ ದಾಖಲಾತಿಗಳನ್ನು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1,1ನೇ ಮಹಡಿ, ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-560027 ಇಲ್ಲಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22240449 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.