 : ಇಂದು ಬೆಳಗಾವಿ, ವಿಜಯಪುರ ಸೇರಿ ಈ ಜಿಲ್ಲೆಗಳಲ್ಲಿ ಹಗುರ ಮಳೆ
ಬೆಂಗಳೂರು:ಸೆ.18ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ( ) ಸಾಧ್ಯತೆಯಿದೆ. ಇನ್ನು ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಸೆ.19ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಳಗಾವಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಅದೇ ರೀತಿ ಸೆ. 20ರಂದು ಕೂಡ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಸೆ.23ರವರೆಗೆ ಇರಲಿದೆ.
ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಒಣ ಹವಾಮಾನ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 °  ಮತ್ತು 20 °  ಆಗಿರಬಹುದು.
