 : ಹಿಂದೂ-ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಸಿದ್ದಾಪುರ ಗ್ರಾಮಸ್ಥರು
ಕೊಪ್ಪಳ:ಮಂಡ್ಯದ ನಾಗಮಂಗಲದ ಕೋಮುಗಲಭೆ, ಮಂಗಳೂರಿನ ಕಾಟಿಪಳ್ಳದಲ್ಲಿ ಈದ್‌ ಮಿಲಾದ್‌ ಹಬ್ಬದ ಮುನ್ನಾ ದಿನ ಮಸೀದಿಯೊಂದರ ಮೇಲೆ ಕಲ್ಲು ತೂರಾಟ ಪ್ರಕರಣಗಳು ಒಂದೆಡೆಯಾದರೆ ಮತ್ತೊಂದೆಡೆ ಕೊಪ್ಪಳ ಜಿಲ್ಲೆಯಲ್ಲಿ ( ) ಮುಸ್ಲಿಂಮರು ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿ, ಈದ್‌ ಮಿಲಾದ್‌ ಹಬ್ಬ ಆಚರಿಸುವ ಮೂಲಕ ಹಿಂದೂ-ಮುಸ್ಲಿಂ ಭಾವೈಕೈತೆ ಸಾರಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗೆ ಮುಸ್ಲಿಂ ಬಾಂಧವರು ಹೂವಿನ ಮಾಲೆ, ಕೇಸರಿ ಶಾಲು, ಪೇಟಾ ತೊಡಿಸಿ, ಪೂಜೆ ಸಲ್ಲಿಸಿದ ಬಳಿಕ ಈದ್ ಮಿಲಾದ್ ಹಬ್ಬವನ್ನು ಆಚರಿಸಿದರು. ಈ ಮೂಲಕ ಹಬ್ಬದಲ್ಲಿ ಹಿಂದೂ-ಮುಸ್ಲಿಮರು ಭಾವೈಕತೆ ಸಾರಿದರು.
ಈ ಸುದ್ದಿಯನ್ನೂ ಓದಿ | : 250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ; ಅಪ್ಲೈ ಮಾಡುವ ವಿಧಾನ ಇಲ್ಲಿದೆ
ಈದ್ ಮಿಲಾದ್ ಪ್ರಯುಕ್ತ ಶರಬತ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಹಿಂದೂ ಹಾಗೂ ಮುಸ್ಲಿಂ ಮುಖಂಡರು ಪಾಲ್ಗೊಂಡಿದ್ದರು.