 :  ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ: ಸಿದ್ದರಾಮಯ್ಯ
ಕಲಬುರಗಿ:ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ () ನಾಳೆ ಸಚಿವ ಸಂಪುಟ ಸಭೆ ( ) ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( ) ತಿಳಿಸಿದರು. ಕಲಬುರಗಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಈ ಸುದ್ದಿಯನ್ನೂ ಓದಿ |  : ರದ್ದಾಗುವ ಭೀತಿಯಲ್ಲಿ ಭಾರತ-ಬಾಂಗ್ಲಾ ನಡುವಣ ಸರಣಿ; ಎಚ್ಚರಿಕೆ ನೀಡಿದ ಸಂಘಟನೆ
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು ಎಂದ ಸಿಎಂ ಅವರು, ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.
ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು,, ಇದಕ್ಕಾಗಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು. 2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತರು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿದ್ದರು ಎಂದರು.
ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.
ಈ ಸುದ್ದಿಯನ್ನೂ ಓದಿ | : 250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ; ಅಪ್ಲೈ ಮಾಡುವ ವಿಧಾನ ಇಲ್ಲಿದೆ
ಮಂಡ್ಯ ಜಿಲ್ಲೆಯ ನಾಗಮಂಗಲದ ಗಲಭೆ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಸಂಬಂಧಪಟ್ಟ ಉಪಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ಸ್‌ಪೆಕ್ಟರ್ ಅನ್ನು ಅಮಾನತ್ತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟ, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.