 : ಮಸೀದಿ ಮೇಲೆ ಕಲ್ಲು ತೂರಾಟ, ಸುರತ್ಕಲ್‌ನಲ್ಲಿ ಆತಂಕ
ಮಂಗಳೂರು: ಮಂಗಳೂರಿನ ಹೊರವಲಯದ ( ) ಸುರತ್ಕಲ್​​ () ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ () ಮೇಲೆ ಕಲ್ಲು ತೂರಾಟ ( ) ನಡೆದಿದೆ. ಇದು ಕೋಮು ಸೂಕ್ಷ್ಮ ಪ್ರದೇಶ ( ) ಎಂದು ಗುರುತಿಸಲ್ಪಟ್ಟಿದ್ದು, ಪ್ರಕರಣ ಆತಂಕಕ್ಕೆ ಕಾರಣವಾಗಿದೆ.
ಕಾಟಿಪಳ್ಳ 3ನೇ ಬ್ಲಾಕ್​​ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ. ಕಲ್ಲು ತೂರಾಟದ ಬಳಿಕ ಇಲ್ಲಿ ಜಮ ಜಮಾಯಿಸಿದರು.
ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್​​ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದ ಮಸೀದಿಗೆ ಸದ್ಯ ಬಿಗಿ ಪೊಲೀಸ್​​​ ಬಂದೋಬಸ್ತ್​​​​​​​ ಕಲ್ಪಿಸಲಾಗಿದೆ.
ಮಂಡ್ಯದ ನಾಗಮಂಗಲದಲ್ಲಿ ನಡೆದಿರುವ ಕೋಮು ಗಲಭೆಯ ಕಿಚ್ಚು ಆರುವ ಮುನ್ನವೇ ಕೋಮು ಸೂಕ್ಷ್ಮ ಪ್ರದೇಶವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಾಟಿಪಳ್ಳದಲ್ಲಿ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಸದ್ಯ ಮಸೀದಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಇದನ್ನೂ ಓದಿ: : ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಭದ್ರತಾ ವೈಫಲ್ಯ; ವೇದಿಕೆಗೆ ನುಗ್ಗಿದ ವ್ಯಕ್ತಿ