 : ಗಣೇಶ ಮೂರ್ತಿ ವಿಸರ್ಜನೆಗೆ ಕೆರೆಗೆ ಇಳಿದಿದ್ದ ತಂದೆ-ಮಗ ಸೇರಿ ಮೂವರು ನೀರುಪಾಲು
ತುಮಕೂರು:ಗಣೇಶ ಮೂರ್ತಿ ವಿಸರ್ಜನೆಗೆಂದು ಕೆರೆಗೆ ಹೋಗಿದ್ದ ತಂದೆ-ಮಗ ಸೇರಿ ಮೂವರು  ನೀರುಪಾಲಾಗಿರುವ ಘಟನೆ ತುಮಕೂರು ಜಿಲ್ಲೆಯ ( ) ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಭಾನುವಾರ ನಡೆದಿದೆ.
ರೇವಣ್ಣ(46), ಶರತ್‌ ಹಾಗೂ ದಯಾನಂದ ಮೃತರು. ದಂಡಿನ ಶಿವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತದೇಹಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸುದ್ದಿಯನ್ನೂ ಓದಿ | : ಸಹೋದರಿಯ ಅತ್ಯಾಚಾರ ಮಾಡಿದವನ್ನುಕೊಂದು ನಗುತ್ತಲೇ ಜೈಲು ಸೇರಿದ ಯುವಕ, ವಿಡಿಯೊ ವೈರಲ್‌
ಬೆಳಗಾವಿ:ವಿದ್ಯಾರ್ಥಿನಿಯರ ಖಾಸಗಿ ಅಂಗಗಳನ್ನು ಮುಟ್ಟಿ ದೌರ್ಜನ್ಯ ಎಸಗಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ( ) ಚಿಕ್ಕೋಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಯರ ಜತೆ ಅನುಚಿತವಾಗಿ ವರ್ತಿಸಿ, ಶೌಚಕ್ಕೆ ಹೋದಾಗ ಖಾಸಗಿ ಫೋಟೊಗಳನ್ನು ತೆಗೆದುಕೊಂಡು ಬರುವಂತೆ ಪೀಡಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನ ಬಂಧಿಸಲಾಗಿದೆ.
ಹಾವೇರಿ ಜಿಲ್ಲೆಯ ಶಿಗ್ಗಾವಿಯ ಶಿಕ್ಷಕ ಮೊಹಮ್ಮದ್  ಸಾದಿಕ್‌ ಬಂಧಿತ ಶಿಕ್ಷಕ. ಕಳೆದ ಐದು ವರ್ಷಗಳಿಂದ ಚಿಕ್ಕೋಡಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಈತ, ಸಾದಿಕ್ ವಿದ್ಯಾರ್ಥಿನಿಯರ ಖಾಸಗಿ ಅಂಗ ಮುಟ್ಟಿ, ವಿಕೃತಿ ಮೆರೆಯುತ್ತಿದ್ದ. ಜತೆಗೆ ಶೌಚಕ್ಕೆ ಹೋಗುತ್ತಿದ್ದಾಗ ಖಾಸಗಿ ಅಂಗಗಳ ಪೋಟೊ ತೆಗೆದುಕೊಂಡು ಬರುವಂತೆಯೂ ವಿದ್ಯಾರ್ಥಿನಿಯರಿಗೆ ಹೇಳುತ್ತಿದ್ದನು. ಇವೆಲ್ಲವನ್ನು ತನ್ನ ಮೊಬೈಲ್‌ನಲ್ಲಿ ಸೇವ್ ಮಾಡಿಟ್ಟುಕೊಂಡಿದ್ದ.
ಈ ಸುದ್ದಿಯನ್ನೂ ಓದಿ |  : ಚಿಕ್ಕಮಗಳೂರಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಿಡಿದು ಓಡಾಡಿದ ಅನ್ಯ ಕೋಮಿನ ಯುವಕರು!
ಈ ರೀತಿ ಕಳೆದ ಒಂದು ವರ್ಷದಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಈ ನಡುವೆ ಒಬ್ಬ ವಿದ್ಯಾರ್ಥಿನಿ ತಾಯಿ ಮುಂದೆ ಶಿಕ್ಷಕನ ದುಷ್ಕೃತ್ಯವನ್ನು ಹೇಳಿದಾಗ, ಪ್ರಕರಣ ಬೆಳಕಿಗೆ ಬಂದಿತ್ತು. ಸದ್ಯ ಚಿಕ್ಕೋಡಿಯ ಪೊಲೀಸರು ಶಿಕ್ಷಕನ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿ, ಬಂಧಿಸಿದ್ದಾರೆ. ಹೀಗಾಗಿ ಶಿಕ್ಷಕನನ್ನು ಸೇವೆಯಿಂದ ಅಮಾನತು ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.