 : ಇಂದು ಧಾರವಾಡ, ಹಾವೇರಿ ಸೇರಿ ವಿವಿಧೆಡೆ ಸಾಧಾರಣ ಮಳೆ
ಬೆಂಗಳೂರು:ಸೆ. 14ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಹಾವೇರಿ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದ್ದು, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯೊಂದಿಗೆ ಮುಖ್ಯವಾಗಿ ಶುಷ್ಕ ಹವಾಮಾನವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( ) ಮುನ್ಸೂಚನೆ ನೀಡಿದೆ.
ಇನ್ನು ಸೆ. 15ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದ್ದು, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಧಾರವಾಡ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಒಂದೆರಡು ಕಡೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯೊಂದಿಗೆ ಮುಖ್ಯವಾಗಿ ಶುಷ್ಕ ಹವಾಮಾನವಿರಲಿದೆ ಎಂದು ಮಾಹಿತಿ ನೀಡಿದೆ. ಇದೇ  ರೀತಿಯ ಹವಾಮಾನ ಸೆ.19ರವರೆಗೆ ಇರಲಿದೆ.
ಈ ಸುದ್ದಿಯನ್ನೂ ಓದಿ |  : ಮಂಕಿ ಪಾಕ್ಸ್‌ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಒಪ್ಪಿಗೆ
ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°  ಮತ್ತು 20°  ಆಗಿರಬಹುದು.