 : ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದೇ, ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?  ಆರ್.ಅಶೋಕ್‌ ಪ್ರಶ್ನೆ
ಬೆಂಗಳೂರು:ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ( ) ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ, ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ( ) ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಗಮಂಗಲದ ಕೋಮುಗಲಭೆ ಪ್ರಕರಣ ಕುರಿತು ಅವರು ತಮ್ಮ ʼಎಕ್ಸ್ʼ ಖಾತೆಯಲ್ಲಿ ಸರಣಿ ಟ್ವೀಟ್‌ ಮಾಡಿ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಈ ಸುದ್ದಿಯನ್ನೂ ಓದಿ | : ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ: ಎಚ್‌ಡಿಕೆ ಆರೋಪ, ಸಂತ್ರಸ್ತರಿಗೆ 2 ಲಕ್ಷ ರೂ. ನೆರವು
ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದುಷ್ಕೃತ್ಯ ನಡೆಸಲಾಗಿದೆ. ಇದು ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು ಸರ್ಕಾರ ತಿಪ್ಪೆ ಸಾರಿಸುವ ಮಾತಾಡುತ್ತಿದೆ. ಮುಸ್ಲಿಂ ಮತಾಂಧರನ್ನು ಓಲೈಕೆ ಮಾಡಲು, ಹಿಂದೂಗಳನ್ನು ಬಲಿಕೊಡಲೂ ಸಿದ್ಧ ಎಂದು ಸರ್ಕಾರ ನಿರ್ಧಾರ ಮಾಡಿದಂತಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
ನಾಗಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ. ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಈ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು ಎಂದು ಆರ್‌.ಅಶೋಕ್‌ ಆಗ್ರಹಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | : ನಾಗಮಂಗಲ ಗಲಭೆ: ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ್ ಅಮಾನತು
ಈ ರೀತಿ ಹಿಂದೂಗಳ ವಿರುದ್ಧವೇ ತಪ್ಪು ಎಫ್ಐಆರ್ ದಾಖಲಿಸಲು ಕಾರಣರಾದ ಪೊಲೀಸರನ್ನು ಈ ಕೂಡಲೇ ಅಮಾನತು ಮಾಡಬೇಕು. ಎಫ್‌ಐಆರ್‌ನಲ್ಲಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡುವ ಈ ಹುನ್ನಾರ ಕೈ ಬಿಡದಿದ್ದರೆ ನಾಗಮಂಗಲದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಆರ್‌.ಅಶೋಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.