  : ವಂದೇ ಭಾರತ್‌ಗೆ ಸೆ.16 ರಂದು ಪ್ರಧಾನಿ ಮೋದಿ ಚಾಲನೆ; ಹುಬ್ಬಳ್ಳಿ-ಪುಣೆ ನೇರ ಸಂಚಾರ
ಹುಬ್ಬಳ್ಳಿ:ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು (  ) ಸಂಚಾರಕ್ಕೆ ಸೆ.16 ರಂದು ಪ್ರಧಾನಿ ನರೇಂದ್ರ ಮೋದಿ (  ) ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ( ) ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಅಂದು ಅಹ್ಮದಾಬಾದ್‌ನಿಂದ ವರ್ಚುವಲ್ ಮೂಲಕ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಸೆ.16 ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದ್ದು, ಹುಬ್ಬಳ್ಳಿಯಿಂದ ಸೆ.18 ರಿಂದ ಸಂಚಾರ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ |  : ಬೆಂಗಳೂರಿನಲ್ಲಿ ನಾಳೆ ಬೃಹತ್ ಉದ್ಯೋಗ ಮೇಳ
ವಾರದಲ್ಲಿ ಮೂರು ಬಾರಿ ಬುಧವಾರ, ಶುಕ್ರವಾರ, ರವಿವಾರ ಹುಬ್ಬಳ್ಳಿಯಿಂದ ಹಾಗೂ ಗುರುವಾರ, ಶನಿವಾರ, ಸೋಮವಾರದಂದು ಪುಣೆಯಿಂದ ವಂದೇ ಭಾರತ್ ಎಕ್ಸಪ್ರೆಸ್ ಸಂಚರಿಸಲಿದೆ.
ಇದು ಹುಬ್ಬಳ್ಳಿ-ಪುಣೆ ನಡುವೆ ನೇರವಾಗಿ ಸಂಚರಿಸಲಿದ್ದು ಕೋಲ್ಹಾಪುರ ಮೂಲಕ ಸಂಚರಿಸುವುದಿಲ್ಲ ಎಂದೂ ಸಚಿವರು ಸ್ಪಷ್ಟಪಡಿಸಿದ್ದಾರೆ.
ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಈ ರೈಲುನ್ನು ಪ್ರತಿ ದಿನ ಸಂಚರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವೆ. ಇದಕ್ಕಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ |--  : ಶಾರ್ಟ್‌ ರೇಂಜ್‌ ಕ್ಷಿಪಣಿಯ ಪರೀಕ್ಷಾರ್ಥ ಹಾರಾಟ ಯಶಸ್ವಿ
ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರದಿಂದ ಉತ್ತರ ಕರ್ನಾಟಕ ಭಾಗದ ವಾಣಿಜ್ಯೋದ್ಯಮಕ್ಕೆ, ಕೈಗಾರಿಕಾ ವಸಾಹತುಗಳಿಗೆ ಅನಕೂಲವಾಗಲಿದೆ. ಅಲ್ಲದೇ, ಮುಂಬೈ ಸಂಪರ್ಕಕ್ಕೆ ಈ ಮಾರ್ಗ ಪ್ರಮುಖವಾಗಲಿದೆ ಎಂದು ತಿಳಿಸಿದ್ದಾರೆ.