 : ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ: ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಕ್ಕೆ ಸೂಚನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ( ) ಅವರು ರೈತರಿಗೆ ಸಿಹಿ ಸುದ್ದಿ ( ) ನೀಡಿದ್ದಾರೆ. ಅಕ್ರಮ ಕೃಷಿ ಪಂಪ್ ಸೆಟ್‌ಗಳ ( ) ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ () ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ, ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.
ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ ಕಾರ್ಯವನ್ನು ತಕ್ಷಣ ಕೈಬಿಡಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದುಗೊಳಿಸಬೇಕು. ಕೃಷಿ ಸಾಲ ಮರುಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ʼಹಣಕಾಸು ಆಸ್ತಿಗಳ ಭದ್ರತೆ ಮತ್ತು ಪುನರ್ ನಿರ್ಮಾಣ ಕಾಯ್ದೆʼ ರದ್ದು ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.
ಬರ, ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ವೈಜ್ಞಾನಿಕ ಮಾನದಂಡಗಳ ಅನ್ವಯ ಪರಿಹಾರ ಕೊಡಬೇಕು. ಖಾಸಗಿ ಫೈನಾನ್ಸ್, ಬ್ಯಾಂಕ್ ಸಾಲ ವಸೂಲಿ ನೆಪದಲ್ಲಿ ರೈತರಿಗೆ ಕಿರುಕುಳ ನೀಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಜಿಂದಾಲ್‌ಗೆ ನೀಡಿದ 3667 ಎಕರೆ ಜಮೀನು ಹಿಂಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರು ಒತ್ತಾಯಿಸಿದ್ದಾರೆ.
ನಿಯೋಗದ ಮನವಿ ಆಲಿಸಿದ ಸಿಎಂ, ಅಕ್ರಮ ಕೃಷಿ ಪಂಪ್ ಸೆಟ್‌ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಆದ್ಯತೆ ಮೇರೆಗೆ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸುದ್ದಿ ಓದಿ: : ತಾಯಿಯನ್ನು ಉಳಿಸಲು ಆಟೋವನ್ನೇ ಎತ್ತಿದ ಬಾಲಕಿಯ ಧೈರ್ಯಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ