 : ಇಂದು ಶಿವಮೊಗ್ಗ, ಉಡುಪಿ ಸೇರಿ ವಿವಿಧೆಡೆ ಮಳೆಯ ಆರ್ಭಟ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು:ಸೆಪ್ಟೆಂಬರ್ 10ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ( ) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಸೆ. 11ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳಗಿನ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅದೇ ರೀತಿ ಸೆ. 12ರಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಸೆ. 15ರವರೆಗೆ ಇರಲಿದೆ.
ಈ ಸುದ್ದಿಯನ್ನೂ ಓದಿ | : ಸೆ.11ರವರೆಗೆ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ, ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°  ಮತ್ತು 21°  ಆಗಿರಬಹುದು.