 : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ವೈದ್ಯಕೀಯ ಭತ್ಯೆ ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ( ) ನೀಡಲಾಗುವ ವೈದ್ಯಕೀಯ ಭತ್ಯೆ ( ) ದರಗಳನ್ನು ಪರಿಷ್ಕರಿಸಿ ( ) ರಾಜ್ಯ ಸರ್ಕಾರ ( ) ಆದೇಶ ಹೊರಡಿಸಿದೆ. ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (   ) ಅನುಷ್ಠಾನಗೊಳಿಸಲಾಗುತ್ತಿದೆ.
ಈಗಾಗಲೇ 7ನೇ ವೇತನ ಆಯೋಗದ ವೇತನ ಶ್ರೇಣಿಯಂತೆ ವೇತನ ಜಾರಿಗೊಳಿಸಲಾಗಿದೆ. ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಗೊಳಿಸುವ ಬಗ್ಗೆಯೂ ಸಮಿತಿಯನ್ನು ರಚಿಸಲಾಗಿದೆ. ಇದಾದ ಬೆನ್ನಲ್ಲೇ ನೌಕರರಿಗೆ ಮತ್ತೊಂದು ಸಿಹಿಸುದ್ದಿಯಿದು. ಈ ಕುರಿತು ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ 05-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ, ಸರ್ಕಾರದ ನೀತಿಯಲ್ಲಿ ವಿವರಿಸಿರುವಂತೆ ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಸ್ತೃತವಾದ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿರುತ್ತದೆ ಎಂದಿದ್ದಾರೆ.
ದಿನಾಂಕ 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂಡಿರುವ ನಿರ್ದಿಷ್ಟ ಭತ್ಯೆಗಳ ಪರಿಷ್ಕರಣೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ ದಿನಾಂಕ 23-08-2024ರ ಸರ್ಕಾರಿ ಆದೇಶದಲ್ಲಿ ಪರಿಷ್ಕೃತ ವೇತನ ಶ್ರೇಣಿಗಳನ್ನು ಅನುಷ್ಠಾನಗೊಳಿಸಿ ವಿಸ್ತೃತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಗ್ರೂಪ್ -ಸಿ ಮತ್ತು ಗ್ರೂಪ್-ಡಿ ವೃಂದದ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಸರ್ಕಾರವು ಅಂಗೀಕರಿಸಿರುತ್ತದೆ. ಅದರಂತೆ, ಈ ಕೆಳಕಂಡ ಆದೇಶವನ್ನು ಹೊರಡಿಸಿದೆ ಎಂದು ಹೇಳಿದ್ದಾರೆ.
ಗ್ರೂಪ್-‘ಸಿ’ ಮತ್ತು ಗ್ರೂಪ್-‘ಡಿ’ ವೃಂದದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂಪಾಯಿಗಳಿಂದ ಮಾಸಿಕ 500 ರೂಪಾಯಿಗಳಿಗೆ 1ನೇ ಆಗಸ್ಟ್ 2024ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ ಎಂದಿದ್ದಾರೆ.
ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (ಕೆ.ಎ.ಎಸ್.ಎಸ್) ಸೌಲಭ್ಯವು ಅನುಷ್ಠಾನಗೊಳ್ಳುವವರೆಗೆ ಈ ವೈದ್ಯಕೀಯ ಸೌಲಭ್ಯವು ಲಭ್ಯವಿರುತ್ತದೆ. ಹಾಗೆಯೇ, ನಗದುರಹಿತ ವೈದ್ಯಕೀಯ ಸೌಲಭ್ಯ ಯೋಜನೆಯು ಅನುಷ್ಠಾನಗೊಂಡ ನಂತರದಲ್ಲಿ ವೈದ್ಯಕೀಯ ಭತ್ಯೆಯ ಮಂಜೂರಾತಿಯ ಈ ಆದೇಶವು ಜಾರಿಯಲ್ಲಿರುವುದು ಕೊನೆಗೊಳ್ಳುತ್ತದೆ ಮತ್ತು ನಗದುರಹಿತ (ಕೆ.ಎ.ಎಸ್.ಎಸ್) ಯೋಜನೆಯು ಅನುಷ್ಠಾನಗೊಂಡ ಬಳಿಕ ಯಾವುದೇ ಸರ್ಕಾರಿ ನೌಕರನು ಈ ಸೌಲಭ್ಯವನ್ನು ಪಡೆಯಲು ಅರ್ಹನಿರುವುದಿಲ್ಲ. ಈ ಭತ್ಯೆಯನ್ನು ಕ್ರಮಬದ್ಧಗೊಳಿಸಲು ವಿಧಿಸಿರುವ ಇತರೆ ಷರತ್ತುಗಳು ಅನ್ವಯಿಸುತ್ತವೆ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿ: : ಆರೋಗ್ಯ ವಿಮೆ ಖರೀದಿಸುವ ಯೋಜನೆಯಲ್ಲಿದ್ದೀರಾ? ಈ ಅಂಶಗಳು ನಿಮ್ಮ ಗಮನದಲ್ಲಿರಲಿ