 : ಇಂದು ಕರಾವಳಿ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!
ಬೆಂಗಳೂರು: ಸೆ.9ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ( ) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸೋಮವಾರ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (40-50 ) ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 ) ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅದೇ ರೀತಿ ಸೆ.10ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನು ಸೆ.11ರಂದು ಕೂಡ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ಸೆ.14ರವರೆಗೆ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚು. ನಿರಂತರ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28°  ಮತ್ತು 21°  ಆಗಿರಬಹುದು.