 : ಮಧುಗಿರಿ ಬಳಿ ಭೀಕರ ಅಪಘಾತ; ಎರಡು ಕಾರುಗಳು ಡಿಕ್ಕಿಯಾಗಿ ಐವರ ದುರ್ಮರಣ
ತುಮಕೂರು:ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ 8 ವರ್ಷದ ಮಗು ಸೇರಿ ಐದು ಜನರು ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ಮಧುಗಿರಿ ತಾಲೂಕಿನಲ್ಲಿ ನಡೆದಿದೆ. ಮಧುಗಿರಿ ತಾಲೂಕಿನ ಕಸಬಾ ವ್ಯಾಪ್ತಿಯ ಕೊರಟಗೆರೆ ಮಧುಗಿರಿ ಗಡಿ ಭಾಗದ ಕಾಟಗಾನ ಹಟ್ಟಿಯ ಬಳಿ ದುರ್ಘಟನೆ ನಡೆದಿದೆ.
ಪಾವಗಡ ತಾಲೂಕಿನ ಎತ್ತನಹಳ್ಳಿ ಗ್ರಾಮದ ಜನಾರ್ದನ ರೆಡ್ಡಿ (50), ಇವರ ಪುತ್ರಿ ಸಿಂಧೂ (40), ಮಗ ಟ್ರಯಾಕ್ಸ್ ದೇವಾ (8), ಮಿಡಿಗೇಶಿ ಹೋಬಳಿಯ ಕಾರೇನಹಳ್ಳಿ ಗ್ರಾಮದವರಾದ ಚಾಲಕ ಸಿದ್ದಗಂಗಪ್ಪ ( 34) ಹಾಗೂ ನಾಗರಾಜು (30) ಮೃತರು. ಟ್ರಾಯಕ್ಸ್‌ ದೇವಾ (8) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಉಳೆದವರೆಲ್ಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೆಎ-03  2646 ಸಂಖ್ಯೆಯ ಸಿಯಾಜ್ ಮಾರುತಿ ಕಾರು ಹಾಗೂ ಕೆಎ-64  2627 ಸಂಖ್ಯೆಯ ಟಿಯಾಗೋ ಕಾರು ನಡುವೆ ಕೆರೆಗಳಪಾಳ್ಯ ಹಾಗೂ ಕಾಟಗಾನಹಟ್ಟಿ ಬಳಿ ಅಪಘಾತ ಸಂಭವಿಸಿದೆ.
ತುಮಕೂರು ಮಾರ್ಗವಾಗಿ ಬರುತ್ತಿದ್ದ ಕಾರಿನಲ್ಲಿದ್ದ ಚಾಲಕ ಮಿಡಿಗೇಶಿ ಹೋಬಳಿಯ ಕಾರೇನಹಳ್ಳಿಯ ವಾಸಿ ನಾಗರಾಜು ಇಬ್ಬರು ಸಹ ಮೃತಪಟ್ಟಿದ್ದು, ಬೆಂಗಳೂರಿನಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಮೃತಪಟ್ಟ ದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಸೇರಿದಂತೆ ಅನೇಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ | : ಭಾರತದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್‌ ಕೇಸ್‌ ಪತ್ತೆ
ಬೆಳಗಾವಿ:ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಸರ್ಕಾರಿ ಬಸ್ ಹರಿದು, ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ( ) ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ.
ಸುನೀಲ್ (10) ಮೃತ ಬಾಲಕ.  ಟ್ಯೂಷನ್ ಮುಗಿಸಿಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳು ಬದಿ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಸಾರಿಗೆ ಬಸ್‌ ವಿದ್ಯಾರ್ಥಿಗಳ ಮೇಲೆ ಹರಿದಿದೆ. ಇದರಿಂದ ಬಾಲಕ ಸುನೀಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ.
ಬಸ್ ಅಥಣಿಯಿಂದ ಕಾರವಾರಕ್ಕೆ ಹೋಗುತ್ತಿದ್ದಾಗ ಅಪಘಾತ ನಡೆದಿದೆ. ಈ ವೇಳೆ ಬಸ್ ಅನ್ನು ಅಡ್ಡಗಟ್ಟಿದ ಸ್ಥಳೀಯರು, ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಕ್ಕಳು ನಿಂತಿರುವುದು ಗಮನಿಸಿದ್ದರೂ ನಿರ್ಲಕ್ಷ್ಯದ ಚಾಲನೆಯಿಂದ ದುರಂತ ಸಂಭವಿಸಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.