   2024: 1,476 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ
ಬೆಂಗಳೂರು:ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (     ) ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ (  & ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (   2024). ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ರಾಯಚೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಟ್ಟು 1,476 ಹುದ್ದೆಗಳಿವೆ. ಆಸಕ್ತ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು ( ).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ದಕ್ಷಿಣ ಕನ್ನಡ – 335, ಉಡುಪಿ- 193, ಮಂಡ್ಯ -341, ರಾಯಚೂರು – 391 ಮತ್ತು ರಾಮನಗರಗಳಲ್ಲಿ – 216 ಹುದ್ದೆಗಳಿವೆ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾಗಿರಬೇಕು. 10ನೇ ತರಗತಿ ತೇರ್ಗಡೆಯಾದವರು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 19 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಮೆರಿಟ್‌ ಲಿಸ್ಟ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಕೊನೆಯ ದಿನಾಂಕ
ದಕ್ಷಿಣ ಕನ್ನಡ, ರಾಯಚೂರು – ಸೆಪ್ಟೆಂಬರ್‌ 29, ಉಡುಪಿ, ರಾಮನಗರ – ಸೆಪ್ಟೆಂಬರ್‌ 30 ಮತ್ತು ಮಂಡ್ಯ – ಸೆಪ್ಟೆಂಬರ್‌ 20 ಅರ್ಜಿ ಸಲ್ಲಿಕೆಗೆ ಕೊನೆಯ ದಿನ.
ಅರ್ಜಿ ಸಲ್ಲಿಸುವ ವಿಧಾನ
ಆನ್‌ಲೈನ್‌ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು
ಹೆಚ್ಚಿನ ವಿವರಗಳಿಗೆ ವಿಬ್‌ಸೈಟ್‌:...inಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: : ಪಂಜಾಬ್‌ & ಸಿಂಧ್ ಬ್ಯಾಂಕ್‌ನಲ್ಲಿದೆ 213 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ