 : ಇಂದು ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆ
ಬೆಂಗಳೂರು:ಸೆ. 8ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ( ) ಸಾಧ್ಯತೆ ಇದೆ. ಇನ್ನು ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಾಗೂ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ( ) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಸೆ.9ರಂದು ಕೂಡ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಅದೇ ರೀತಿ ಸೆ.10ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಸೆ.13ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚು, ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರು ಮತ್ತು ಸುತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು, ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28°  ಮತ್ತು 20°  ಆಗಿರಬಹುದು.