 : ಇಂದು ಬೆಳಗಾವಿ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ!
ಬೆಂಗಳೂರು:ಸೆ. 7ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ( ) ಸಾಧ್ಯತೆಯಿದೆ. ಒಳನಾಡಿನರ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆಯಾಗಲಿದೆ ( ) ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಸೆ.8ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಕಲಬುರ್ಗಿ, ಬೀದರ್, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 ) ಆಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಅದೇ ರೀತಿ ಸೆ. 9ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಸೆ.12ರವರೆಗೆ ಕರಾವಳಿ ಕರ್ನಾಟಕದ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ |Ettinahole_celebration: ಎತ್ತಿನಹೊಳೆ ಲೋಕಾರ್ಪಣೆ: ಜಿಲ್ಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾಂಗ್ರೆಸ್
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28°  ಮತ್ತು 20°  ಆಗಿರಬಹುದು.