  : ವಿದ್ಯುತ್‌ ಗ್ರಾಹಕರಿಗೆ ಗುಡ್‌ ನ್ಯೂಸ್‌, ಸೆ. 8, 15ರ ಭಾನುವಾರವೂ ತೆರೆದಿರಲಿವೆ ಬೆಸ್ಕಾಂ ಕ್ಯಾಶ್‌ ಕೌಂಟರ್‌
ಬೆಂಗಳೂರು:ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ವಿದ್ಯುತ್‌ ಸಂಪರ್ಕದ ಕಡಿತದಿಂದ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಸೆ. 8 ಮತ್ತು 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ಗಳು (  ) ತೆರೆದಿರಲಿವೆ. ಆನ್‌ಲೈನ್‌ ಪೇಮೆಂಟ್‌ ಬಳಸದವರ ಅನುಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆಯನ್ನು ಬೆಸ್ಕಾಂ ಮಾಡಿದೆ.ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಎಂಬ ಉದ್ದೇಶದಿಂದ ಬೆಸ್ಕಾಂ ವಲಯದ ಎಲ್ಲ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ ಗಳನ್ನು ಸೆ. 8 ಮತ್ತು 15ರ ಭಾನುವಾರವೂ ತೆರೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆ. 1ರಿಂದಲೇ ಈ ನಿಯಮ ಜಾರಿಯಾಗಿದೆ. ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ, ಮೀಟರ್‌ ರೀಡಿಂಗ್‌ಗೆ ಬರುವ ದಿನವೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಕೋರಿದೆ.ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿಯಲ್ಲಿ ಶೂನ್ಯ ಬಿಲ್‌ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯ ಇದ್ದಲ್ಲಿ ಚಿಂತಿಸಬೇಕಿಲ್ಲ ಎಂದು ಬೆಸ್ಕಾಂ ತಿಳಿಸಿದೆ.
ಈ ಸುದ್ದಿಯನ್ನೂ ಓದಿ |  2024: ಸಂತೋಷ, ಸಂಭ್ರಮವನ್ನು ಹೊತ್ತುಕೊಂಡು ಮತ್ತೆ ಬಂದ ಗಣೇಶ
ಬೆಂಗಳೂರು:ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಪಡೆಯಲು ಕೆಲ ನಿಯಮಾವಳಿಗಳನ್ನು ತಪ್ಪದೇ ಪಾಲಿಸಲು ಬೆಸ್ಕಾಂ ಸೂಚಿಸಿದೆ.
ಗಣೇಶೋತ್ಸವ ಸಂದರ್ಭದಲ್ಲಿ ಸುರಕ್ಷಿತ ಮತ್ತು ಪರಿಣಾಮಕಾರಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ನಿರ್ದಿಷ್ಟ ಕಾರ್ಯವಿಧಾನಗಳು ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯ.#../WXWtXsHR6n
