 : ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಲಿದ್ದಾನೆ ವರುಣ!
ಬೆಂಗಳೂರು:ಸೆ.4ರಂದು ಬುಧವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ( ) ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಸೆ. 5ರಂದು ಕೂಡ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸೆ.6ರಂದು ಉತ್ತರ ಕನ್ನಡ ಜಿಲ್ಲೆಯ ಮೇಲೆ ಭಾರಿ ಮಳೆಯಾಗುವ ಸಂಭವವಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಅದೇ ರೀತಿ ಸೆ.7ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸೆ. 9ರವರೆಗೆ ಇದೇ ರೀತಿಯ ಹವಾಮಾನ ಇರಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28°  ಮತ್ತು 20°  ಆಗಿರಬಹುದು.
ಈ ಸುದ್ದಿಯನ್ನೂ ಓದಿ | : ಭಾರೀ ಮಳೆಗೆ ಆಂಧ್ರ, ತೆಲಂಗಾಣ ತತ್ತರ; 10 ಬಲಿ- 100ಕ್ಕೂಅಧಿಕ ರೈಲುಗಳು ರದ್ದು
ಸೆಪ್ಟೆಂಬರ್ 11ರವರೆಗೆ ಮುಂದುವರಿಯಲಿದೆ ಭಾರಿ ಮಳೆ
ಸೆಪ್ಟೆಂಬರ್ 11ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಹ ಮಲೆನಾಡು ಜಿಲ್ಲೆಗಳಿಗೆ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ( ) ನಿರೀಕ್ಷೆಯಿದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ವ್ಯಾಪಕವಾಗಿ ತುಂತುರು ಮಳೆ ಹಾಗೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ( ) ಮುನ್ಸೂಚನೆ ನೀಡಿದೆ.
ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ತುಂತುರು ಮಳೆ ಹಾಗೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ಅದೇ ರೀತಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ತಿಳಿಸಿದೆ.