 : ನಾಳೆ ಬೆಂಗಳೂರು, ಹಾಸನ, ತುಮಕೂರು ಸೇರಿ ವಿವಿಧೆಡೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು:ಅಕ್ಟೋಬರ್ 4ರಂದು‌ ಶುಕ್ರವಾರ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ  ( ) ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಅ.5 ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
ಅದೇ ರೀತಿ ಅ.6ರಂದು ಕರಾವಳಿ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಬುಹತೇಕ ಕಡೆ ಇದೇ ರೀತಿಯ ಹವಾಮಾನ ಅ.8ರವರೆಗೆ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಈ ಸುದ್ದಿಯನ್ನೂ ಓದಿ |  : ಮನೆಗೆ ಬಂದ ತಕ್ಷಣ ಪಾದಗಳನ್ನು ತೊಳೆಯುವುದರಿಂದ ಸಿಗುತ್ತವೆ ಹಲವು ಲಾಭಗಳು…
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಮಳೆ ಹಾಗೂ ಒಮ್ಮೊಮ್ಮೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 °  ಮತ್ತು 20 °  ಆಗಿರಬಹುದು.