  2024: 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ: ಸಿದ್ದರಾಮಯ್ಯ
ಮೈಸೂರು:ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ (  ) ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ( ) ತಿಳಿಸಿದರು. ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ (  2024) ಚಲನಚಿತ್ರೋತ್ಸವವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.
ಚಿತ್ರರಂಗದ ಬೆಳವಣಿಗೆಗೆ ಸರ್ಕಾರವು ಎಲ್ಲಾ ರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕು ಎಂದು ಸಿಎಂ ತಿಳಿಸಿದರು.
ಈ ಸುದ್ದಿಯನ್ನೂ ಓದಿ |  2024: ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ, ಆರ್ಥಿಕ ಶಕ್ತಿ ತುಂಬುತ್ತಿದ್ದೇವೆ: ಸಿಎಂ
ದಸರಾ ಚಲನಚಿತ್ರೋತ್ಸವ ಅಕ್ಟೋಬರ್ 04 ರಿಂದ 10 ವರೆಗೆ ನಡೆಯಲಿದ್ದು, ದೇಶ ವಿದೇಶಗಳ ಪ್ರಶಸ್ತಿ ಪುರಸ್ಕೃತ ಚಲನಚಿತ್ರಗಳು ಪ್ರದರ್ಶನವಾಗಲಿದೆ. ಚಲನಚಿತ್ರೋತ್ಸವದಲ್ಲಿ ಹಳೆಯ ಹಾಗೂ ಹೊಸ ಸಿನಿಮಾಗಳನ್ನು ವೀಕ್ಷಿಸುವ ಸುವರ್ಣ ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕಾಗಿ ತಿಳಿಸಿದರು.
ಈ ಸುದ್ದಿಯನ್ನೂ ಓದಿ |  : ನವರಾತ್ರಿ 2ನೇ ದಿನದ ಹಸಿರು ಎಥ್ನಿಕ್‌ವೇರ್ಸ್‌‌ನಲ್ಲಿ ಆಕರ್ಷಕವಾಗಿ ಕಾಣಿಸಲು ಇಲ್ಲಿದೆ 5 ಸಿಂಪಲ್‌ ಐಡಿಯಾ
ನಟ, ನಿರ್ಮಾಪಕ ದಿವಂಗತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿ ದಸರಾ ಚಿತ್ರೋತ್ಸವವನ್ನು ದ್ವಾರಕೀಶ್ ಅವರ ಗೌರವಾರ್ಥವಾಗಿ ಹಮ್ಮಿಕೊಳ್ಳಲಾಗಿದೆ. ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಮರೆಯಲಾಗದ ವ್ಯಕ್ತಿ. ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ದ್ವಾರಕೀಶ್ ಅವರ ಜತೆ ಪ್ರಯಾಣಿಸಿದ ನೆನಪನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಅವರೊಂದಿಗಿದ್ದ ಸ್ನೇಹ ಬಾಂಧವ್ಯದ ಬಗ್ಗೆ ತಿಳಿಸಿದರು. ದ್ವಾರಕೀಶ್ ಅವರ ಮಕ್ಕಳು ಕನ್ನಡ ಚಿತ್ರರಂಗಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಸಿಎಂ ಸಿದ್ದರಾಮಯ್ಯ ಅವರು ಶುಭ ಹಾರೈಸಿದರು.