ದ್ವಿತೀಯ ಪಿಯು ಫಲಿತಾಂಶ ಇಂದು ಪ್ರಕಟ
ಬೆಂಗಳೂರು:ಯುಗಾದಿ ಹಬ್ಬದ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ನಾಳೆಯೇ ಫಲಿತಾಂಶ ಪ್ರಕಟಗೊಳ್ಳಲಿದೆ. ಏ.10 ರಂದು ಫಲಿತಾಂಶ ಬಿಡುಗಡೆಯಾಗಲಿದೆ. ಈ ಸಂಬಂಧ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದೆ.
://.. ವೆಬ್ ಸೈಟ್ ನಲ್ಲಿ 11 ಗಂಟೆ ನಂತರ ಫಲಿತಾಂಶ ವೀಕ್ಷಿಸಬಹುದು.
ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾ.25ರಿಂದಲೇ ಮೌಲ್ಯ ಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಈ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ವಿದ್ಯಾರ್ಥಿಗಳು ಬಯಸಿದರೆ ಮತ್ತೊಮ್ಮೆ ಪರೀಕ್ಷೆ ಬರೆಯಬಹುದು.
.. ಅಥವಾ .. ಅಧಿಕೃತ ವೆಬ್‌​ಸೈಟ್‌​ಗೆ ಭೇಟಿ ನೀಡಿ.
* ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.* ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ನಮೂದಿಸಿ. ವಿಜ್ಞಾನ, ವಾಣಿಜ್ಯ ಮತ್ತು ಕಲೆ ಎಂಬ ಆಯ್ಕೆಗಳಿರಲಿದ್ದು, ನಿಮ್ಮ ಕೋರ್ಸ್‌ ಯಾವುದೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.* ನಂತರ ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸಲಿದ್ದು, ಬಳಿಕ ಈ ಫಲಿತಾಂಶದ ಪುಟವನ್ನು ಡೌನ್‌ ಲೋಡ್ ಮಾಡಿಕೊಳ್ಳಬಹುದಾಗಿದೆ.