ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಕೊಲ್ಹಾರ:ತಾಲೂಕಿನ ಕುಪಕಡ್ಡಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ, ಗುರುವಂದನೆ, 8 ನೇ ತರಗತಿ ವಿದ್ಯಾರ್ಥಿಗಳ ಶುಭಕೋರುವ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಅಭಿನಂದನೆ ಸಮಾರಂಭ ಫೆ.23 ರ ಶುಕ್ರವಾರದ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಫೆ.23 ರ ಶುಕ್ರವಾರ ಸಾಯಂಕಾಲ 6 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಎಸ್‌.ಡಿ.ಎಮ್.ಸಿ ಅಧ್ಯಕ್ಷರಾದ ಮುರುಗೇಶ ಹಳ್ಳಿ ಸಹಿತ ಅನೇಕ ಗಣ್ಯರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.