 : ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!
ಬೆಂಗಳೂರು:ರಾಜ್ಯದಲ್ಲಿ ಆರಂಭದಲ್ಲೇ ಹಿಂಗಾರು ಮಳೆ ಚುರುಕು ಪಡೆದಿದ್ದು, ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇನ್ನು ಅ.3ರಂದು ಗುರುವಾರ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ( ) ಸಾಧ್ಯತೆಯಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ( ) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿ ಕರಾವಳಿ ಜಿಲ್ಲೆಗಳು, ಇನ್ನು ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಸೇರಿ ಉತ್ತರ ಒಳನಾಡು ಹಾಗೂ ಬೆಂಗಳೂರು, ಚಿಕ್ಕಮಗಳೂರು, ಕೊಡಗು ಸೇರಿ ದಕ್ಷಿಣ ಒಳನಾಡಿನಲ್ಲಿ ಗುರುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅದೇ ರೀತಿ ಅ. 4ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ಅ.5ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಇದೇ ರೀತಿಯ ಹವಾಮಾನ ಅ.8 ರವರೆಗೆ ಮುಂದುವರಿಯಲಿದೆ ಎಂದು ತಿಳಿಸಿದೆ.
ಈ ಸುದ್ದಿಯನ್ನೂ ಓದಿ | : ಮುಂದಿನ 5 ದಿನ ರಾಜ್ಯದ ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°  ಮತ್ತು 22°  ಆಗಿರಬಹುದು.
ಮುಂದಿನ 5 ದಿನ ರಾಜ್ಯದಲ್ಲಿ ವಿವಿಧೆಡೆ ಭಾರಿ ಮಳೆ ಸಾಧ್ಯತೆ
ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 4 ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ನಂತರ ಮಳೆ ( ) ತೀವ್ರತೆ ಕಡಿಮೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.