  : ಮನೆಯಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟ; ನಾಲ್ವರಿಗೆ ಗಂಭೀರ ಗಾಯ
ಧಾರವಾಡ:ಮನೆಯಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು (  ) ನಾಲ್ವರು ಗಂಭೀರವಾಗಿ ಗಾಯಗೊಂಡಿರುವುದು ಜಿಲ್ಲೆಯ ಕುಂದಗೋಳ ತಾಲೂಕಿನ ರೊಟ್ಟಿಗವಾಡದಲ್ಲಿ ನಡೆದಿದೆ.
ಸಿದ್ದಲಿಂಗಯ್ಯ ಹಿರೇಮಠ, ಪತ್ನಿ ವಿಶಾಲಾ ಹಿರೇಮಠ, ಪುತ್ರ ಶ್ರೀಪಾದಯ್ಯ, ಸಿದ್ದಲಿಂಗಯ್ಯ ತಮ್ಮನ ಪತ್ನಿ ನಿರ್ಮಲಾ ಹಿರೇಮಠ ಗಾಯಾಳುಗಳು. ಇವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ | : ಡೊಳ್ಳು ಬಾರಿಸುವ ಬದಲು ಎದುರಾಳಿ ಗುಂಪಿಗೆ ಬಾರಿಸಿದರು! ಗಣಪತಿ ವಿಸರ್ಜನೆ ಗಲಾಟೆ
ಮಂಗಳೂರು: ಮದುವೆಯಾಗಿ ಗಂಡನ ಮನೆಯ ಹೊಸ್ತಿಲು ತುಳಿದ ಎರಡೇ ದಿನದಲ್ಲಿ ನವವಧು ಹಾಗೂ ವರ ದಾರುಣ ರಸ್ತೆ ( ) ಅಪಘಾತಕ್ಕೀಡಾಗಿ, ವಧು ಮೃತಪಟ್ಟ ( ) ಹಾಗೂ ವರ ತೀವ್ರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ( ) ಜಿಲ್ಲೆಯ ಬಂಟ್ವಾಳ ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ರಸ್ತೆ ಅಪಘಾತ ನಡೆದಿದೆ. ಕಾರು ಅಪಘಾತದಲ್ಲಿ ವಧು ಸಾವನ್ನಪ್ಪಿದ್ದು, ಪತಿಗೆ ತೀವ್ರ ಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಮೃತರು. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರಿಬ್ಬರೂ ಎರಡು ದಿನಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರೂ ಮಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಬಿಸಿ ರಸ್ತೆಯಿಂದ ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ನವದಂಪತಿಗಳು ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಗುದ್ದಿದೆ. ನಂತರ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮಾನಸ ಸ್ಥಳದಲ್ಲೇ ಮೃತಪಟ್ಟಿದ್ದರೆ, ಪತಿ ಅನಿಶ್ ಕೃಷ್ಣಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೆ. 05 ರಂದು ದೇಂತಡ್ಕ ದೇವಸ್ಥಾನದಲ್ಲಿ ಇಬ್ಬರ ಮದುವೆ ನೆರವೇರಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಲೆಕ್ಕಾಚಾರ ಮಾಡಲು ದಂಪತಿಗಳು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಸ್ ಮನೆಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.
