   : ಸೆ.14, 15ಕ್ಕೆ ಕೆಪಿಎಸ್‌ಸಿ ಗ್ರೂಪ್-ಬಿ ಹುದ್ದೆಗಳ ನೇಮಕಾತಿ ಪರೀಕ್ಷೆ; ಪ್ರವೇಶ ಪತ್ರ ಪ್ರಕಟ ಯಾವಾಗ?
ಬೆಂಗಳೂರು:ಬಿಬಿಎಂಪಿ, ಜಲ ಸಂಪನ್ಮೂಲ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿನ ಗ್ರೂಪ್‌-ಬಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.14 ಮತ್ತು 15ರಂದು ಕೆಪಿಎಸ್‌ಸಿ (   ) ನಿಗದಿಪಡಿಸಿದೆ. ಅಭ್ಯರ್ಥಿಗಳಿಗೆ ಸೆ.5ರಿಂದ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ಸದ್ಯ ತಾತ್ಕಾಲಿಕವಾಗಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಲಾಗಿದೆ.
ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. 2024ರ ಮಾರ್ಚ್‌ 13ರಂದು  ಅಧಿಸೂಚಿಸಿರುವ ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆ.14 ಮತ್ತು 15ರಂದು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೆ.5ರಂದುಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ತಾಂತ್ರಿಕ ಕಾರಣದಿಂದಾಗಿ ಕೆಲವು ಅಭ್ಯರ್ಥಿಗಳ ಪರೀಕ್ಷಾ ಉಪಕೇಂದ್ರಗಳ ಹಂಚಿಕೆಯಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ, ತಾತ್ಕಾಲಿಕವಾಗಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಲಾಗಿದೆ. ಶೀಘ್ರದಲ್ಲಿಯೇ ಸಮಸ್ಯೆ ಬಗೆಹರಿಸಲಾಗುವುದು. ಆ ನಂತರ ಅಭ್ಯರ್ಥಿಗಳು ಹೊಸದಾಗಿ ಮತ್ತೊಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು ಎಂದು ಆಯೋಗ ತಿಳಿಸಿದೆ.
../r5ix3xmdGB
ಬಿಬಿಎಂಪಿ, ಜಲ ಸಂಪನ್ಮೂಲ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿನ ಒಟ್ಟು 277 ಗ್ರೂಪ್‌-ಬಿ ಹುದ್ದೆಗಳಿಗೆ ಸೆ.14 ಮತ್ತು 15ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
ಕಡ್ಡಾಯ ಕನ್ನಡ ಪರೀಕ್ಷೆ
ಈ ಹುದ್ದೆಗಳಿಗೆ ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ನಿಯಮ ಉಪ ನಿಯಮ-7 ರಲ್ಲಿ ನಿರ್ದಿಷ್ಟ ಪಡಿಸಲಾದಂತೆ, ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿದ್ದು, ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪ್ರಶ್ನೆ, ಪತ್ರಿಕೆಯನ್ನು ಎಸ್.ಎಸ್.ಎಲ್.ಸಿ. ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗುತ್ತದೆ.
ವಿಶೇಷ ಸೂಚನೆ:ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು 29-11-2022ರ ನಂತರ ನಡೆಸಿರುವ ಕನ್ನಡ ಭಾಷಾ ಪರೀಕ್ಷೆ ಫಲಿತಾಂಶವನ್ನು ಈ ಅಧಿಸೂಚನೆಯಲ್ಲಿನ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೂ ಪರಿಗಣಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಆನ್ ಲೈನ್ ಅರ್ಜಿಯ ನಿಗದಿತ ಅಂಕಣದಲ್ಲಿ ಕನ್ನಡ ಭಾಷಾ ಪರೀಕ್ಷೆ ಕುರಿತಂತೆ ಕೇಳಿರುವ ಮಾಹಿತಿಯನ್ನು ತಪ್ಪದೇ ನಮೂದಿಸಿರಬೇಕು.
ಸ್ಪರ್ಧಾತ್ಮಕ ಪರೀಕ್ಷಾ ವಿಧಾನ:ಪರೀಕ್ಷೆಯು ತಲಾ 300 ಅಂಕಗಳ ಎರಡು ಪ್ರಶ್ನೆ ಪತ್ರಿಕೆ (ಸಾಮಾನ್ಯ ಪತ್ರಿಕೆ-1‌, ನಿರ್ದಿಷ್ಟ ಪತ್ರಿಕೆ -2) ಒಳಗೊಂಡಿರುತ್ತದೆ. ಪತ್ರಿಕೆ-1ರಲ್ಲಿ ಪ್ರಚಲಿತ ವಿದ್ಯಮಾನ, ಸಾಮಾನ್ಯ ವಿಜ್ಞಾನ, ಭಾರತ ಹಾಗೂ ಕರ್ನಾಟಕದ ಇತಿಹಾಸ, ಭೂಗೋಳ ಶಾಸ್ತ್ರ, ಸಮಾಜ ವಿಜ್ಞಾನ, ಬೌದ್ಧಿಕ ಸಾಮರ್ಥ್ಯ, ದೈನಂದಿನ ಗ್ರಹಿಕೆ ವಿಷಯಗಳು ಇರಲಿವೆ. ಇನ್ನು ಪತ್ರಿಕೆ-2 ನಿರ್ದಿಷ್ಟ ಪತ್ರಿಕೆಯಾಗಿದ್ದು, ಆಯಾ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದಂತೆ ಪಠ್ಯಕ್ರಮ ನೀಡಲಾಗಿದ್ದು, ಕೆಪಿಎಸ್‌ಸಿ ಅಧಿಸೂಚನೆಯಲ್ಲಿ ಪಠ್ಯಕ್ರಮ ನೀಡಲಾಗಿದೆ.
ಬೆಂಗಳೂರು:ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (   ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್‌ ಹೈಡ್ರೋಜಿಯಾಲಜಿಸ್ಟ್‌, ಜಿಯಾಲಜಿಸ್ಟ್‌ (ಭೂ ವಿಜ್ಞಾನಿ) ಸೇರಿ 85 ಹುದ್ದೆಗಳು ಖಾಲಿ ಇವೆ (  2024). ಸ್ನಾತಕೋತ್ತರ ಪದವಿ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 24 ( ).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಜಿಯಾಲಜಿಸ್ಟ್‌ – 16 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿಭೂಭೌತಶಾಸ್ತ್ರಜ್ಞ () – 6  ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿಕೆಮಿಸ್ಟ್‌ – 2 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿಸೈಂಟಿಸ್ಟ್ ಬಿ (ಹೈಡ್ರೋಜಿಯಾಲಜಿ) – 13 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿಸೈಂಟಿಸ್ಟ್ ಬಿ (ಕೆಮಿಕಲ್) – 1  ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿಸೈಂಟಿಸ್ಟ್ ಬಿ (ಜಿಯೋಫಿಸಿಕ್ಸ್) – 1 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿಅಸಿಸ್ಟಂಟ್‌ ಹೈಡ್ರೋಜಿಯಾಲಜಿಸ್ಟ್ – 31 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿಅಸಿಸ್ಟಂಟ್‌ ಕೆಮಿಸ್ಟ್‌ – 4 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿಅಸಿಸ್ಟಂಟ್‌ ಜಿಯೋಫಿಸಿಸ್ಟ್‌- 11 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿ
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು.
ಆಯ್ಕೆ ವಿಧಾನ
ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ, ಪರ್ಸನಾಲಿಟಿ ಟೆಸ್ಟ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಅರ್ಜಿ ಸಲ್ಲಿಸುವ ವಿಧಾನ
ಹೆಚ್ಚಿನ ವಿವರಗಳಿಗೆ, ಸಂಶಯ ನಿವಾರಣೆಗೆ ದೂರವಾಣಿ ಸಂಖ್ಯೆ: 011-23385271/011-23381125/011-23098543ಕ್ಕೆ ಕರೆ ಮಾಡಿ. ಅಧಿಕೃತ ವೆಬ್‌ಸೈಟ್‌: ..inಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: : ಕೊಂಕಣ ರೈಲ್ವೆಯಲ್ಲಿ ಕರ್ನಾಟಕದವರಿಗೆ 190 ಉದ್ಯೋಗ, ಸರ್ಜಿ ಸಲ್ಲಿಸುವುದು ಹೀಗೆ