ದೇಶ ರಕ್ಷಣೆ ಪ್ರತಿಯೊಬ್ಬರ ಹೊಣೆ: ಬಾಲಾಜಿ ಗಂಗಾಧರ್ ಹವಾಲ್ದಾರ್
ಆನೇಕಲ್:ದೇಶ ರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ನಿವೃತ್ತ ಸೇನಾಧಿಕಾರಿ ಬಾಲಾಜಿ ಗಂಗಾಧರ್ ಹವಾಲ್ದಾರ್ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ತಾಲೂಕಿನ ಜಿಗಣಿ ಸಮೀಪದ ಹರಪ್ಪನಹಳ್ಳಿಯ ಬೃಂದಾವನ ಶಾಲೆಯಲ್ಲಿ ನಡೆದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೊಹಣ ನೆರವೇರಿಸಿ ಅವರು ಮಾತನಾಡಿದರು. ಪ್ರಾ0ಶುಪಾಲ ರಾಜು ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ವಿದ್ಯಾರ್ಥಿಗಳು ಶಿಸ್ತು ಮೈಗೂಡಿಸಿ ಕೊಂಡು ಉನ್ನತ ವಿದ್ಯಾಭ್ಯಾಸ ಮಾಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಸಲಹೆ ನಿಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೃಂದಾವನ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಪುಷ್ಪಲತಾ ಶೇಖರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಮತ್ತು ಪೋಷಕರು ಹಾಜರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.