ಮಂಡ್ಯದಲ್ಲಿ ರೈತರ ಆಕ್ರೋಶ
ಮಂಡ್ಯ:ಜುಲೈ 31ರ ವರೆಗೂ ತಮಿಳುನಾಡಿಗೆ ( ) ನಿತ್ಯ ಒಂದು ಟಿಎಂಸಿ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ (    ) ನೀಡಿರುವ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಆಕ್ರೋಶ ಮತ್ತೆ ಭುಗಿಲೆದಿದ್ದೆ.
 ಆದೇಶ ಖಂಡಿಸಿ ಮಂಡ್ಯದಲ್ಲಿ () ಇಂದು ರೈತರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಸಂಜಯ್ ವೃತ್ತದಲ್ಲಿ ಬೆಂ-ಮೈ ಹೆದ್ದಾರಿ (  ) ತಡೆದು ರೈತರು ಪ್ರತಿಭಟನೆ ನಡೆಸಿದ್ದು, ಕನ್ನಡ ಸೇನೆ ಹಾಗೂ ವಿವಿಧ ಸಂಘಟನೆಗಳು ಹಾಗೂ ರೈತರು ಪ್ರತಿಭಟನೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
 ಆದೇಶ ಪಾಲನೆ ಮಾಡದಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ ರೈತರು, ರೈತರಿಗೆ ವಿಷ ಭಾಗ್ಯ ಕೊಡಿ. ನಮಗೆ ಕುಡಿಯುವ ನೀರಿಲ್ಲ, ತಮಿಳುನಾಡಿಗೆ ಮತ್ತೆ ನೀರು ಕೊಡುವುದು ಸರಿಯಲ್ಲ. ತಕ್ಷಣವೇ ಸಂಸದರು ಸಭೆ ಕರೆದು ಧ್ವನಿ ಎತ್ತಬೇಕು. ಸಿಎಂ ಡಿಸಿಎಂ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಕರ್ನಾಟಕಕ್ಕೆ ಅನ್ಯಾಯ ಮಾಡದಂತೆ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡದಂತೆ ಮನವಿ ರೈತರು ಮನವಿ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಮಾಜಿ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಸುನಂದಾ ಜಯರಾಂ ಸೇರಿ ಹಲವರು ಭಾಗಿಯಾಗಿದ್ದರು.
ಇಂದಿನಿಂದ ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ನೀರು ಬಿಡಲು  ಶಿಫಾರಸ್ಸು ಮಾಡಿತ್ತು. ಕೆಆರ್‌ಎಸ್ ಜಲಾಶಯಕ್ಕೆ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಜುಲೈ 31ರವರೆಗೆ ನೀರು ಬಿಡಲು ಆದೇಶ ನೀಡಿದೆ.