 : ಯುವತಿ ಪತ್ತೆಗೆ ಮನವಿ
ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ತಾಲ್ಲೂಕಿನ ಚೊಕ್ಕಹಳ್ಳಿ ಗ್ರಾಮದ ೨೦ ವರ್ಷದ ಅನುಶ್ರೀ ಎಂಬ ಯುವತಿ ಸೆಪ್ಟೆಂಬರ್ ೩೦ ರಂದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಗೆ ಬೀಗ ಹಾಕಿ ಚಪ್ಪಲಿ ಸ್ಟ್ಯಾಂಡಿನಲ್ಲಿ ಬೀಗದ ಕೀಲಿ ಇಟ್ಟು ಹೊರಟು ಹೋಗಿದ್ದಾರೆ.
ಈ ಬಗ್ಗೆ ಅಕ್ಕ ಪಕ್ಕದ ಮನೆಯಲ್ಲಿ ಹಾಗೂ ಸಂಬ0ಧಿಕರ ಮನೆಗಳಲ್ಲಿ ಹುಡುಕಿದರೂ ಪತ್ತೆಯಾಗದ ಕಾರಣ ಕಾಣೆಯಾದ ನನ್ನ ಮಗಳನ್ನು ಪತ್ತೆ ಮಾಡಿಕೊಡುವಂತೆ ತಂದೆ ಅಶ್ವತ್ಥಪ್ಪ  ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
೨೦ ವರ್ಷದ ಅನುಶ್ರೀ ಎಂಬ ಯುವತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹತ್ತಿರ ಪೊಲೀಸ್ ಠಾಣೆಗೆ ಹಾಗೂ ಚಿಕ್ಕಬಳ್ಳಾಪುರ ನಗರದ ಮಹಿಳಾ ಪೋಲೀಸ್ ಠಾಣೆಯನ್ನು ಸಂಪರ್ಕಿಸಬಹುದೆAದು ಪೊಲೀಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: : ದೇಶವನ್ನು ಮುನ್ನಡೆಸುವಲ್ಲಿ ಯುವಶಕ್ತಿಯ ಪಾತ್ರ ಪ್ರಧಾನವಾಗಿದೆ-ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ