 : ಇಂದು ರಾಜ್ಯದ ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆರಾಯನ ಅಬ್ಬರ
ಬೆಂಗಳೂರು:ಅ.1ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ( ) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದೇ ರೀತಿ ಅ.2ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಅ.3ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡಿನ ಜಿಲ್ಲೆಗಳ ಮೇಲೆ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಅ.4ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡಿನ ಜಿಲ್ಲೆಗಳ ಮೇಲೆ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.6ರವರೆಗೆ ಮುಂದುವರಿಯಲಿದೆ.
ಈ ಸುದ್ದಿಯನ್ನೂ ಓದಿ | : ರಾತ್ರಿ ಮಲಗುವ ಮೊದಲು ಬಿಸಿ ನೀರು ಕುಡಿಯಬೇಕೇ? ತಣ್ಣೀರು ಕುಡಿಯಬೇಕೇ?
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31°  ಮತ್ತು 21°  ಆಗಿರಬಹುದು.