ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು:2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದೆ.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವ ಎಸ್‌ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದು, ಮಾರ್ಚ್​ 1 ರಿಂದ 22ರ ವರೆಗೆ ಪಿಯುಸಿ ಹಾಗೂ ಮಾರ್ಚ್​​ 25 ರಿಂದ ಜೂನ್​ 6 ರವರೆಗೆ ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.
ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಇರಲಿದೆ.
ಎಲ್ಲ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದರು ಪರೀಕ್ಷೆಗೆ ಹಾಜರಾಗಬೇಕು. ಮೂರು ಪರೀಕ್ಷೆಯಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
 ಪರೀಕ್ಷೆಯ ಅಂತಿಮ ವೇಳಾಪಟ್ಟಿ
ದ್ವೀತಿಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ