ಗೋಲ್ ಗುಂಬಜ್ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಇ-ಮೇಲ್
ಬೆದರಿಕೆ ಬರುತ್ತಿದ್ದಂತೆಯೇ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ತಲುಪಿಸಿದ್ದು, ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಬಾಂಬ್ ಪತ್ತೆ ದಳದೊಂದಿಗೆ ಸ್ಥಳಕ್ಕೆ ಪೊಲೀಸರು ಧಾವಿಸಿದರು. ಆದರೂ ಅದು ಯಾರೋ ದುಷ್ಕರ್ಮಿಗಳು ಕಳುಹಿಸಿದ್ದ ಹುಸಿ ಮೇಲ್ ಎಂಬುದು ನಂತರ ತಿಳಿದುಬಂದಿದೆ.
ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಾನೆ, ಇಮೇಲ್ ಸುಳ್ಳು ಎಂದು ಕಂಡುಬಂದಿದೆ ಮತ್ತು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ದೇಶದ ವಿವಿಧ ಐತಿಹಾಸಿಕ ವಸ್ತುಸಂಗ್ರಹಾಲಯಗಳಿಗೆ ಇಂತಹ ಮೇಲ್ ಕಳುಹಿಸಲಾಗಿದೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ.