ಪಿಎಸ್‌ಐ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಮಂಗಳೂರು :ನಗರದಲ್ಲಿ ಕರ್ತವ್ಯದಲ್ಲಿದ್ದ ಸಿಐಎಸ್‌ಎಫ್ ನ ಪಿಎಸ್‌ಐವೊಬ್ಬರು​ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ನಿವಾಸಿ ಪಿಎಸ್‌ಐ ಜಾಕೀರ್ ಹುಸೇನ್ (58) ಆತ್ಮಹತ್ಯೆ ಮಾಡಿಕೊಂಡವರು. ಜಾಕೀರ್ ಹುಸೇನ್ ಅವರನ್ನು  ಮುಖ್ಯ ಗೇಟ್‌ನಲ್ಲಿ ನೈಟ್ ಶಿಫ್ಟ್‌ಗೆ ನಿಯೋಜಿಸಲಾಗಿತ್ತು. ಪಾಳಿ ಮುಗಿಸಿ ಮುಖ್ಯ ಗೇಟ್‌ನ ಪಕ್ಕದಲ್ಲಿರುವ ವಾಶ್‌ರೂಮ್‌ಗೆ ತೆರಳಿದ್ದಾರೆ. ಈ ವೇಳೆ ವಾಶ್​ ರೂಮ್​ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.
ಇದೇ ತಿಂಗಳ ಆರಂಭದಲ್ಲಿ ಛತ್ತೀಸ್​ಗಢದ ಕೊರ್ಬಾ ಜಿಲ್ಲೆಯಲ್ಲಿ ಇವಿಎಂ ಭದ್ರತೆಗಾಗಿ ನಿಯೋಜಿಸಿದ್ದ ಯೋಧನೊಬ್ಬ ತನ್ನದೇ ಐಎನ್​ಎಸ್​ಎಎಸ್​ ರೈಫಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು.