ಇಂದಿನಿಂದ ಅ.15ರವರೆಗೆ ಮಹದೇಶ್ವರ ಬೆಟ್ಟದಲ್ಲಿ ನಿರ್ಬಂಧ
ಚಾಮರಾಜನಗರ:ಚಾಮರಾಜ ನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ (ಅ.12 ) 15ರವರೆಗೆ ಮಹಾಲಯ ಅಮಾವಾಸ್ಯೆ ಜಾತ್ರಾ ಜರುಗಲಿದೆ. ಈ ಹಿನ್ನೆಲೆ ಭಕ್ತರ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಮಾದರಿಯ ದ್ವಿಚಕ್ರ ವಾಹನಗಳಿಗೆ ತತ್ಕಾಲಿವಾಗಿ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಆದೇಶ ಹೊರಡಿಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಅಕ್ಟೋಬರ್‌ 15ರವರೆಗೆ ಜರುಗಲಿರುವ ಮಹಾಲಯ ಅಮಾವಾಸ್ಯೆ ಜಾತ್ರಾ ಹಿನ್ನೆಲೆ ಹೊರಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಸುಮಾರು 1.5 ರಿಂದ 2 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಸೇರುವ ಸಂಭವ ಇದೆ.
ವಾಹನ ದಟ್ಟಣೆ ಹೆಚ್ಚಾಗುವುದರಿಂದ, ರಸ್ತೆಯು ಅರಣ್ಯ ಪ್ರದೇಶ ಹಾಗೂ ತುಂಬಾ ಕಡಿದಾದ ತಿರುವುಗಳಿಂದ ಕೂಡಿದ್ದು, ಇದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದ್ವಿಚಕ್ರ ವಾಹನಗಳಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.