ರೀಲ್ಸ್’ನಿಂದ ಖ್ಯಾತಿ ಗಳಿಸಿದ ಯುವಕನ ಬೈಕ್ ಅಪಘಾತ
ಚಾಮರಾಜನಗರ:ರೀಲ್ಸ್ ಮೂಲಕ ಗಮನ ಸೆಳೆಯುತ್ತಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಗುಂಬಳ್ಳಿ ಬಳಿ ನಡೆದಿದೆ.
ಯಳಂದೂರು ತಾಲೂಕಿನ ಕೃಷ್ಣಾಪುರದ ಮಹೇಶ್(24) ಮೃತ ಯುವಕ. ನಿಯಂತ್ರಣ ತಪ್ಪಿ ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಯುವಕ ಎಳನೀರು ಕೀಳುವ ಕೆಲಸ ಮಾಡುವ ಜೊತೆಗೆ ರೀಲ್ಸ್ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದ. ಡ್ಯಾನ್ಸ್, ಸ್ಟಂಟ್​ಗಳನ್ನು ರೀಲ್ಸ್ ಮಾಡಿ ಜನಪ್ರಿಯತೆ ಗಳಿಸಿದ್ದ. ಯಳಂದೂರು ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.