ಎತ್ತಿನ ಹೊಳೆ ಯೋಜನೆಗೆ 22,252 ಕೋಟಿ ರೂ. ಮೀಸಲು
ಬೆಂಗಳೂರು:ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡ ಲಾಗಿದ್ದು ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ಬಜೆಟ್ ನಲ್ಲಿ ನಿರ್ಧಾರ ಮಾಡಲಾಗಿದೆ.
19 ಕೆರೆ ತುಂಬಿಸುವ ಯೋಜನೆಗೆ ಬರೊಬ್ಬರಿ 770 ಕೋಟಿ ರೂಪಾಯಿ ಮೀಸಲಿಡ ಲಾಗಿದೆ. ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ ಮಾಡಲಾಗಿದ್ದು, ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದೆ.
ಸಿದ್ದರಾಮಯ್ಯ ಇದೀಗ 14 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆಗಸ್ಟ್ ತಿಂಗಳಲ್ಲಿ ಗೃಹಜ್ಯೋತಿ ಯೋಜನೆ ಅಧಿಕೃತವಾಗಿ ಜಾರಿಗೆ ಬರಲಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕಾಗಿರುವುದರಿಂದ ವಾರ್ಷಿಕವಾಗಿ 52 ಸಾವಿರ ಕೋಟಿ ರೂ. ಬೇಕಾಗುತ್ತದೆ ಎಂದು ಹೇಳಿದ್ದಾರೆ.