ರಾಹುಲ್‌ ಗಾಂಧಿ ಜೊತೆಗೆ ನಾವು ಇದ್ದೀವಿ:  ಡಿ.ಕೆ ಶಿವಕುಮಾರ್
ಬೆಂಗಳೂರು:ರಾಹುಲ್‌ ಗಾಂಧಿ ಜೊತೆಗೆ ನಾವು ಇದ್ದೀವಿ, ಕೋರ್ಟ್‌ ಏನೇ ತೀರ್ಪು ಕೊಡಲಿ. ನಾವು ಅವರ ಪರ ಇದ್ದು, ಮಧ್ಯಾಹ್ನ ಮೂರು ಗಂಟೆಗೆ ಸುಮಾರಿಗೆ ವಿಧಾನ ಸೌಧದ ಮುಂಭಾಗದ ಗಾಂಧಿಜೀಯವರ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುತ್ತೇವೆ ಆಂತ  ಡಿ.ಕೆ ಶಿವಕುಮಾರ್ ಹೇಳಿದರು.
ಇದು ಬಿಜೆಪಿಯ ಕುತಂತ್ರವಾಗಿದ್ದು, ಈನಿಟ್ಟಿನಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು.
ಇನ್ನೂ ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರ ನ್ಯಾಯಾಲಯವು ಈ ತೀರ್ಪನ್ನು ನೀಡಿದೆ.
ರಾಹುಲ್ ಗಾಂಧಿ ವಿರುದ್ಧ ಕನಿಷ್ಠ 8 ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗಳು ಬಾಕಿ ಉಳಿದಿವೆ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವು ಯಾವುದೇ ಹಸ್ತಕ್ಷೇಪವನ್ನು ಬಯಸುವುದಿಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ.