ಕನ್ನಡ ಸಾಹಿತ್ಯ ಪರಿಷತ್ತಿನ ʻಯನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದʼ ಗೌರವ ಸಂಚಾಲಕರಾಗಿ ಸತೀಶ ನಂಜಪ್ಪ ನೇಮಕ
ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತಿನ ʻಯನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕʼದ ಗೌರವ ಸಂಚಾಲಕರಾಗಿ ಸತೀಶ ನಂಜಪ್ಪ ಅವರನ್ನು ನೇಮಕ ಮಾಡಲಾಗಿದೆ.
ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋ ದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ- ರ್ನಾಟಕದ ಹಿತರಕ್ಷಣೆ ಕಾಪಾಡುವ ಜವಾಬ್ದಾರಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಹೊಂದಿದ್ದು, ಪರಿಷತ್ತನ್ನು ‘*ಜನಸಾಮಾನ್ಯರ ಪರಿಷತ್ತನ್ನಾಗಿಸುವ*’ ನಿಟ್ಟಿನಲ್ಲಿ ಕಾರ್ಯ ಯೋಜನೆಗಳನ್ನು ಪರಿಣಾಮಕಾರಿ ಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಹಿನ್ನೆಲೆ ಯಲ್ಲಿ ಹೊರದೇಶದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆ ಗಳನ್ನು ಪ್ರಪಂಚದಾಧ್ಯಂತ ವಿಸ್ತರಿಸಲಾಗುತ್ತಿದೆ.
ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರನ್ನು ಪರಿಷತ್ತಿಗೆ ಸದಸ್ಯರನ್ನಾಗಿಸಲು, ಕನ್ನಡಪರ ಕಾರ್ಯಚಟುವಟಿಕೆಗಳನ್ನು ಅಮೆರಿಕದಲ್ಲಿ ನಡೆಸಲು, ಕನ್ನಡ ಸಾಹಿತ್ಯ ಸಮಾವೇಶ, ಸಮ್ಮೇಳನಗಳ ಯೋಜನೆಯನ್ನು ಕಾರ್ಯಾನುಷ್ಠಾನಗೊಳಿಸಲು, ಅಮೆರಿಕಾದಲ್ಲಿರುವ ಕನ್ನಡಿಗರೊಂದಿಗೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಸಮನ್ವಯ ಸಾಧಿಸುವ ಉದ್ದೇಶಗಳಿಗಾಗಿ ಶ್ರೀ ಸತೀಶ ನಂಜಪ್ಪ ಅವರನ್ನು ʻ*ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕʼದ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸಂಚಾಲಕ”ರನ್ನಾಗಿ ನೇಮಕ ಮಾಡಲಾಗಿದೆ*.
ಸತೀಶ್ ನಂಜಪ್ಪ ಅವರು ಕನ್ನಡ ಪರ ಚಿಂತಕರಾಗಿದ್ದು, ಪ್ರಸ್ತುತ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದ ಭಾರತೀಯ ಸಮು ದಾಯ ನಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಅನಿವಾಸಿ ಭಾರತೀಯ ಕನ್ನಡಿಗರನ್ನು ಒಂದು ಗೂಡಿಸುವ ಮೂಲಕ ಕನ್ನಡ ನಾಡು ನುಡಿಗಾಗಿ ಗಣನೀಯ ಸೇವೆ ಸಲ್ಲಿಸಲಿದ್ದಾರೆ ಎನ್ನುವ ಭರವಸೆ ಪರಿಷತ್ತಿಗೆ ಇದೆ.