ಜೂನ್ 15ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು:ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗಿದ್ದಾ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶವನ್ನು ಜೂನ್ 15ರಂದು ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳು ತಿಳಿಸಿವೆ.
ಸಿಇಟಿ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಪ್ರಸ್ತುತ ಸಿಇಟಿ ಅಮಕ ಮತ್ತು ದ್ವಿತೀಯ ಪಿಯುಸಿ ಅಂಕಗಳನ್ನು ಆಧರಿಸಿ ರ್ಯಾಂಕ್ ಪಟ್ಟಿ ಯನ್ನು ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ.
ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂ.12 ಅಥವಾ ಜೂ.14ರಂದು ಫಲಿತಾಂಶವನ್ನು ಪ್ರಕಟಿಸಲು ನಿರ್ಧರಿಸಿತ್ತು. ಆದರೆ ಉನ್ನತ ಶಿಕ್ಷಣ ಸಚಿವರ ಲಭ್ಯತೆ ಮತ್ತು ಕೆಲವು ತಾಂತ್ರಿಕ ಕಾರಣಗಳಿಂದ ಜೂ.15 ರಂದು ಫಲಿತಾಂಶ ಪ್ರಕಟಿಸಲು ನಿರ್ಧರಿಸಿದೆ.
ಯುಜಿಸಿಇಟಿ-2023ರ ಫಲಿತಾಂಶವನ್ನು ಆನ್‌ಲೈನ್‌ ಮೂಲಕ ಪ್ರಕಟಿಸಲಾಗುತ್ತದೆ.