ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್
ಬೆಂಗಳೂರು:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ, 8 ಮಂದಿ ಶಾಸಕರು ಸಚಿವರಾಗಿ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 8 ಮಂದಿ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿ ದ್ದಾರೆ.
ಕರ್ನಾಟಕದ 31 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದೇ ರೀತಿ 8 ಮಂದಿ ನೂತನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರು