ಖರ್ಗೆ ಸಿಎಂ ಆಗಲಿ: ಸೋಶಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್
ಬೆಂಗಳೂರು:ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿ ಎಂದು ಅವರ ಬೆಂಬಲಿಗರು, ಅಭಿಮಾ ನಿಗಳು ಸೋಶಿಯಲ್ ಮೀಡಿಯಾ ದಲ್ಲಿ ಕ್ಯಾಂಪೇನ್ ಆರಂಭಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಲ್ಲಿ ಇದೀಗ ಸಿಎಂ ಸ್ಥಾನಕ್ಕೆ ಪೈಪೋಟಿ ಶುರುವಾಗಿದ್ದು, ಹೈಕಮಾಂಡ್ ಸಿಎಂ ಹುದ್ದೆ ಆಯ್ಕೆ ಸಂಬಂಧ ಮಹತ್ವದ ಚರ್ಚೆ ನಡೆಸಲಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಗಲಿ, ಖರ್ಗೆ ಸಿಎಂ ಆಗಲು ಎಲ್ಲರೂ ಬೆಂಬಲಿಸ ಬೇಕು ಎಂದು ಖರ್ಗೆ ಪರ ಕ್ಯಾಂಪೇನ್ ನಡೆಯುತ್ತಿದೆ. ಈಗಾಗಲೇ 3 ಬಾರಿ ಸಿಎಂ ಸ್ಥಾನದಿಂದ ವಂಚಿತರಾಗಿರುವ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕು, ಸಿಎಂ ಹುದ್ದೆಗೆ ಅವರು ಸಮರ್ಥ ಅನುಭವಿ ವ್ಯಕ್ತಿ ಅವರು ಸಿಎಂ ಆಗಬೇಕು ಎಂದು ಖರ್ಗೆ ಬೆಂಬಲಿಗರು, ಅಭಿಮಾ ನಿಗಳು ಸೋಶಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಆರಂಭಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಲ್ಲಿ ಇದೀಗ ಸಿಎಂ ಸ್ಥಾನಕ್ಕೆ ಪೈಪೋಟಿ ಶುರುವಾಗಿದ್ದು, ಇಂದು ಹೈಕಮಾಂಡ್ ಸಿಎಂ ಹುದ್ದೆ ಆಯ್ಕೆ ಸಂಬಂಧ ಮಹತ್ವದ ಚರ್ಚೆ ನಡೆಸಲಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಸ್ಥಾನಕ್ಕೆ ಪೈಪೋಟಿ ಶುರುವಾಗಿದ್ದು, ಈ ಹಿನ್ನೆಲೆ ಯಲ್ಲಿ ಸಿಎಂ ಆಯ್ಕೆ ಮಾಡುವ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಲಿದ್ದು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ, ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.
ಸೋಮವಾರ ಬೆಳಿಗ್ಗೆಯೂ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದು ಸುರ್ಜೇವಾಲ ಮಾಹಿತಿ ನೀಡಿದ್ದಾರೆ.
ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಲಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಹ ಭಾಗವಹಿಸ ಲಿದ್ದಾರೆ. ಎಐಸಿಸಿ ಅಧ್ಯಕ್ಷರೇ ನಿರ್ಧರಿಸಿದರೆ ಗೊಂದಲ ಆಗುವುದಿಲ್ಲ. ಹೀಗಾಗಿ ಅವರೇ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂಬ ತೀರ್ಮಾನಕ್ಕೆ ವೀಕ್ಷಕರು ಬಂದಿದ್ದಾರೆ ಎನ್ನಲಾಗಿದೆ.