ಜಮೀರ್ ಅಹಮದ್ ಗೆ ಡಿಸಿಎಂ ಸ್ಥಾನ ನೀಡುವಂತೆ ಪಟ್ಟು
ಬೆಂಗಳೂರು :ಜಮೀರ್ ಅಹಮದ್ ಗೆ ಡಿಸಿಎಂ ಸ್ಥಾನ ನೀಡುವಂತೆ ಅವರ ಅಭಿಮಾನಿಗಳು ಪಟ್ಟು ಹಿಡಿದಿದ್ದು, ಸಿದ್ದರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.
ಸಿದ್ದರಾಮಯ್ಯ ಸರ್ಕಾರಿ ನಿವಾಸದ ಮುಂದೆ ಬೆಂಬಲಿಗರು ‘ಮುಂದಿನ ಡಿಸಿಎಂ ಜಮೀರ್ ಅಹಮದ್’ ಎಂಬ ಬ್ಯಾನರ್ ಹಿಡಿದು ಘೋಷಣೆ ಕೂಗಿದ್ದಾರೆ.
ಜಮೀರ್ ಅವರಿಗೆ ಡಿಸಿಎಂ ಹುದ್ದೆ ಕೊಟ್ಟರೆ ಅಲ್ಪಸಂಖ್ಯಾತ ಸೇರಿದಂತೆ ಎಲ್ಲಾ ಸಮುದಾ ಯಕ್ಕೆ ನ್ಯಾಯ ನೀಡಲಿದ್ದಾರೆ.
ನಮ್ಮ ಮುಸ್ಲಿಂ ಸಮುದಾಯದ ನಾಯಕ ಜಮೀರ್ ಅವರಿಗೆ ನಾವು ಬೆಂಬಲ ನೀಡಿ ಗೆಲ್ಲಿಸಿದ್ದೇವೆ, ಅವರನ್ನು ಡಿಸಿಎಂ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಲ್ಲಿ ಇದೀಗ ಸಿಎಂ ಸ್ಥಾನಕ್ಕೆ ಪೈಪೋಟಿ ಶುರುವಾಗಿದ್ದು, ಇಂದು ಹೈಕಮಾಂಡ್ ಸಿಎಂ ಹುದ್ದೆ ಆಯ್ಕೆ ಸಂಬಂಧ ಮಹತ್ವದ ಚರ್ಚೆ ನಡೆಸಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ.
ದೆಹಲಿಯಲ್ಲಿ ಸೋಮವಾರ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಲಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಹ ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷರೇ ನಿರ್ಧರಿಸಿದರೆ ಗೊಂದಲ ಆಗುವುದಿಲ್ಲ. ಹೀಗಾಗಿ ಅವರೇ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂಬ ತೀರ್ಮಾನಕ್ಕೆ ವೀಕ್ಷಕರು ಬಂದಿದ್ದಾರೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಸ್ಥಾನಕ್ಕೆ ಪೈಪೋಟಿ ಶುರುವಾಗಿದ್ದು, ಈ ಹಿನ್ನೆಲೆ ಯಲ್ಲಿ ಸಿಎಂ ಆಯ್ಕೆ ಮಾಡುವ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ದೆಹಲಿಗೆ ತೆರಳಲಿದ್ದು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ, ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.