ಬಿಜೆಪಿ ಅಭ್ಯರ್ಥಿ ಕಿರಣ್‌ ಕೊಡ್ಗಿಗೆ ಭರ್ಜರಿ ಗೆಲುವು
ಉಡುಪಿ:ಬಿಜೆಪಿಯ ಭದ್ರಕೋಟೆ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್‌ ಕೊಡ್ಗಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕುಂದಾಪುರದ ವಾಜಪೇಯಿ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಅವರ ಭದ್ರಕೋಟೆ ಕುಂದಾಪುರ ವಿಧಾನಸಭಾ ಕ್ಷೇತ್ರ.
1999ರಿಂದ ಆರಂಭಗೊಂಡು ಇಲ್ಲಿಯವರೆಗೆ ಸೋಲಿಲ್ಲದ ಸರದಾರನಂತೆ ಗೆಲುವಿನ ಕುದುರೆ ಏರಿ ಸಾಗುತ್ತಿರುವ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ, ಜಾತಿಯನ್ನು ಮೀರಿದ ನಾಯಕನಾಗಿ ಹೊರಹೊಮ್ಮಿ ದ್ದರು.
2004, 2008, 2013, 2018ರಲ್ಲಿ ಸತತ ಗೆಲುವು ಕಂಡಿರುವ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಈ ಬಾರಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿದು ತಮ್ಮ ಆಪ್ತ ಕಿರಣ್‌ ಕೊಡ್ಗಿ ಅವರಿಗೆ ಅವಕಾಶ ಮಾಡಿಕೊಟ್ಟಿದ್ದರು.
ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಬೆಂಬಲ ಸೂಚಿಸಿರುವ ಕಿರಣ್‌ ಕೊಡ್ಗಿ ಇಪತ್ತು ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದು, ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ.