ಮಳೆ ಅವಾಂತರ: ಸೌಂದರ್ಯ ಕಳೆದುಕೊಂಡ ಸ್ಮಾರ್ಟ್ ಸಿಟಿ
ತುಮಕೂರು ಸ್ಮಾರ್ಟ್ ಸಿಟಿ ಗಬ್ಬೆದ್ದು ನಾರುತ್ತಿದೆ. ಮಳೆ ನೀರುಸರಾಗವಾಗಿ ಹರಿಯದೆ ಎಲ್ಲೆಂದರಲ್ಲಿ ನಿಂತು ಜನರು ಓಡಾಡಲು ತೊಂದರೆಯಾಗಿದೆ. ಇದಕ್ಕೆ ಶಾಸಕ ಜ್ಯೋತಿಗಣೇಶ್, ಸಂಸದ ಬಸವರಾಜ್ ಕಾರಣ.ಸ್ಮಾರ್ಟ್ ಸಿಟಿ ಕಾಮಗಾರಿ ಸರಿಯಾಗಿ ನಡೆದಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿಗಳನ್ನು ಮಾಡಲಾಗಿದ್ದು, ಸಾಕಷ್ಟು ಅವ್ಯವಹಾರ ನಡೆದಿದೆ. ಈ ಅವ್ಯವಹಾರವನ್ನು ಸಿಬಿಐ ತನಿಖೆಗೆ ವಹಿಸಬೇಕು.
ಮಾಜಿ ಸಚಿವ ಸೊಗಡು ಶಿವಣ್ಣ
ಮಳೆಯ ಕಾರಣದಿಂದಾಗಿ ನಗರದಲ್ಲಿ ಕೆಲವು ಕಡೆ ನೀರು ನಿಂತು ಜನರಿಗೆ ತೊಂದರೆಯಾಗಿತ್ತು. ಸಂಬಂಧಿಸಿದ ಅಧಿಕಾರಿ ಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲು ಸೂಚಿಸಲಾಗಿದೆ. ಹಲವು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹಾರಕ್ಕೆ ಕ್ರಮ ವಹಿಸಲಾಗಿದೆ.
ಜ್ಯೋತಿಗಣೇಶ್, ಶಾಸಕ.