 : ದಸರಾ ಮಹೋತ್ಸವ-2024 ರ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಜ್ಯಪಾಲರಿಗೆ ಅಧಿಕೃತ ಆಹ್ವಾನ
ಬೆಂಗಳೂರು:ವಿಶ್ವವಿಖ್ಯಾತ ಮೈಸೂರು ದಸರಾ( ) ಮಹೋತ್ಸವ-2024 ರ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(   ) ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತ ಆಹ್ವಾನ ನೀಡಲಾಯಿತು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಲು ರಾಜಭವನಕ್ಕೆ ತೆರಳಿ ಅಲ್ಲಿ ಅವರಿಗೆ ನಾಡ ಹಬ್ಬಕ್ಕೆ ಆಹ್ವಾನಿಸಿದರು.
ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ. ಮಹದೇವಪ್ಪ(  ) ನವರ ಬೆಂಗಳೂರಿನ ಅವರ ಸ್ವಗೃಹಕ್ಕೆ ತೆರಳಿ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ ಅವರು ಮೈಸೂರು ದಸರಾಗೆ ಗೌರವಪೂರ್ವಕವಾಗಿ ಅಧಿಕೃತವಾಗಿ ಆಮಂತ್ರಣ ನೀಡಿದರು.
ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಳಾದ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಡಾ ಪಿ. ಶಿವರಾಜು ಹಾಗೂ ಸ್ವಾಗತ ಸಮಿತಿಯ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:  2024: ಮೈಸೂರು ದಸರಾ ನೋಡಲು ಹೋದಾಗ ಈ ಸ್ಥಳಗಳಿಗೆ ತಪ್ಪದೇ ಭೇಟಿ ನೀಡಿ!