ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ: ೪,೫೮,೫೮೦ ಲಕ್ಷ ರೂ ಸಂಗ್ರಹ
ಚಿಕ್ಕನಾಯಕನಹಳ್ಳಿ :ಪಟ್ಟಣದ ಇತಿಹಾಸ ಪ್ರಸಿದ್ದ ಹಳೆಯೂರು ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿಯನ್ನು ಎಣಿಕೆ ಮಾಡಲಾಗಿದ್ದು ೪,೫೮,೫೮೦ ಲಕ್ಷ ರೂಗಳು ಸಂಗ್ರಹವಾಗಿದೆ.
ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಗ್ರೂಪ್ ಸಿ ದೇವಸ್ಥಾನ ಇದಾಗಿದ್ದು, ಎಂಟು ತಿಂಗಳ ಅವಧಿಯಲ್ಲಿ ಭಕ್ತರಿಂದ ಸಂಗ್ರಹ ವಾದ ಕಾಣಿಕೆಯಾಗಿದೆ. ಗ್ರಾಮ ಲೆಕ್ಕಾಧಿಕಾರಿ ಮರುಳಸಿದ್ದೇಗೌಡ ನೇತೃತ್ವದಲ್ಲಿ ಹುಂಡಿ ಹಣ ಎಣಿಕೆ ನಡೆದಿದೆ.
ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ, ಹಾಗು ಭಕ್ತಾದಿಗಳು ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು.